ಉಪ್ಪಿನಂಗಡಿ:(ಜೂ.21) ಬೆಂಕಿ ಅವಘಡದಿಂದ ಫ್ಯಾನ್ಸಿ ಅಂಗಡಿ ಪಕ್ಕದಲ್ಲಿದ್ದ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.
ಪೃಥ್ವಿ ಮಹಲ್ ನಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಮೊದಲಿಗೆ ಫ್ಯಾನ್ಸಿ ಅಂಗಡಿಯಿಂದ ಹೊಗೆ ಕಾಣಿಸಿಕೊಂಡಿತ್ತು ಬಳಿಕ ಬೆಂಕಿ ವ್ಯಾಪಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇದೀಗ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉಪ್ಪಿನಂಗಡಿಯಲ್ಲಿ ಅಗ್ನಿ ಅವಘಡ: ಪೃಥ್ವಿ ಮಹಲ್‌ನಲ್ಲಿರುವ ಫ್ಯಾನ್ಸಿ ಅಂಗಡಿಗೆ ಬೆಂಕಿ
