ಉಡುಪಿ:(ಜು.5) ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದಲೇ ದೈಹಿಕ ಶಿಕ್ಷಕನೋರ್ವ ಸ್ವಚ್ಛಗೊಳಿಸಿದ ಅಮಾನವೀಯ ಘಟನೆಯೊಂದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರಕಾರ ಈಗಾಗಲೇ ಸುತ್ತೋಲೆ ಹೊರಡಿಸಿ ಎಚ್ಚರಿಕೆ ನೀಡಿದೆ.
ಅಲ್ಲದೆ, ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಮಾಡಬೇಕೆಂದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ. ಇದರ ಹೊರತಾಗಿಯೂ ಬುದ್ಧಿವಂತರ ಜಿಲ್ಲೆ ಎನಿಸಿಕೊಂಡ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
One thought on “ಉಡುಪಿ: ಉಡುಪಿಯ ನಿಟ್ಟೂರು ಶಾಲೆಯಲ್ಲಿ ಅಮಾನವೀಯ ಘಟನೆ”
ಇದು ನಾನು ಕಲಿತ ಶಾಲೆ 😔