Fri. Apr 11th, 2025

Mangalore : ಪ್ರಸಿದ್ದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ : ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಆರೋಪ

ಮಂಗಳೂರು :(ಜು.9) ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ನಡೆದಿದೆ.

ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ. ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿ ಹುಚ್ಚಾಟ ನಡೆಸಿದ್ದಾನೆ. ಅಲ್ಲದೆ ಬಳಿಕ ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಹುಚ್ಚಾಟ ನಡೆಸಿರೋ ಮಾಹಿತಿ ಇದೆ. ಈ ವೇಳೆ ಸ್ಥಳದಲ್ಲಿದ್ದವರು ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಈ ರೀತಿಯ ದಾಂಧಲೆ ನಡೆಸಿದ್ದಾನೆ. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದು, ಯುವಕನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.

ಅಣ್ಣಪ್ಪಣ ಕಡ್ತಲೆ ಮುಟ್ಟಿದ ಹಿನ್ನೆಲೆ ಶುದ್ಧೀಕರಣ ಮಾಡಲಾಗಿದೆ. ಈ ಹಿಂದೆಯೂ ಸುಧಾಕರ ಆಚಾರ್ಯ ಬೇರೆ ಎರಡು ಮೂರು ದೇವಾಲಯಗಳಿಗೆ ನುಗ್ಗಿ ದಾಂಧಲೆ ನಡೆಸಿರುತ್ತಾನೆ. ಇನ್ನು ಈತ ದೇವಾಲಯದ ಆವರಣದೊಳಗೆ ಬೈಕ್ ತಂದ ವೇಳೆ ಭಕ್ತರಿಗೂ ಗಾಯಗಳಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು