Mon. Apr 7th, 2025

Bengaluru: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ನಾಲಿಗೆ ಹರಿಬಿಟ್ಟ ಶಾಸಕ ಭರತ್ ಶೆಟ್ಟಿ: ಇನಾಯತ್ ಅಲಿ

ಬೆಂಗಳೂರು:(ಜು.12) ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿಯಾಗಿ ನಾಲಿಗೆ ಹರಿಬಿಟ್ಟ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧ

ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಇಂದು ವಿಧಾನಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಇದನ್ನೂ ಓದಿ:https://uplustv.com/2024/07/12/bengaluru-ದಕ್ಷಿಣ-ಕನ್ನಡ-ತೆಂಗು-ರೈತ-ಉತ್ಪಾದಕರ-ಸಂಸ್ಥೆಗೆ-ಚಿತ್ತಾರ-ಸ್ಟಾರ್-ಅವಾರ್ಡ್-ಪ್ರಶಸ್ತಿ/

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಫೀದ್ ಅಡ್ಯಾರ್, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್, ಮುಖಂಡರಾದ ರವಿ ಶಿಯಾನ್ ಹೊಸಬೆಟ್ಟು, ಮುಸ್ತಫಾ ಗಂಜಿಮಠ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು