Sat. Apr 12th, 2025

Yash Hairstyle:ಯಶ್‌ ಹೊಸ ಹೇರ್​ಸ್ಟೈಲ್ ಸೀಕ್ರೆಟ್‌ ಏನು?

Yash New Look: ಯಶ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ದೇಶ-ವಿದೇಶದಲ್ಲಿ ಅವರಿಗೆ ಫ್ಯಾನ್ಸ್ ಹುಟ್ಟಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾಗಳು.

ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲುವು ಕಂಡಿತು. ಈ ಕಾರಣದಿಂದಲೇ ಯಶ್ ಅವರ ಜನಪ್ರಿಯತೆ ಹೆಚ್ಚಿತು. ಈ ಸಿನಿಮಾದಲ್ಲಿ ಉದ್ದನೆಯ ಗಡ್ಡ ಹಾಗೂ ಕೂದಲು ಬಿಟ್ಟುಕೊಂಡು ಯಶ್ ಗಮನ ಸೆಳೆದಿದ್ದರು. ಈಗ ಅವರು ಹೊಸ ಚಿತ್ರಕ್ಕಾಗಿ ಸ್ಟೈಲ್ ಬದಲಿಸಿಕೊಂಡಿದ್ದಾರೆ.

ನಟ ಯಶ್ ಅವರು ‘ಕೆಜಿಎಫ್ 2’ ಬಳಿಕ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಇದೆ. ಅವರು ಈ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ ಎನ್ನಲಾಗಿದೆ. ಯಶ್ ಅವರಿಗೂ ಮುಕೇಶ್ ಅಂಬಾನಿ ಮಗನ ಮದುವೆಗೆ ಆಮಂತ್ರಣ ಸಿಕ್ಕಿದೆ.

ಹೀಗಾಗಿ, ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆ ಕಾರ್ಯಕ್ರಮಕ್ಕೆ ಯಶ್ ತೆರಳಿದ್ದಾರೆ. ಈ ವೇಳೆ ಅವರ ‘ಟಾಕ್ಸಿಕ್’ ಸಿನಿಮಾ ಲುಕ್ ರಿವೀಲ್ ಆಗಿದೆ. ಹೊಸ ಹೇರ್​ಸ್ಟೈಲ್​ನಲ್ಲಿ ಯಶ್ ಗಮನ ಸೆಳೆದಿದ್ದಾರೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ಟೀಸರ್ ಈ ಮೊದಲು ಅನಾವರಣಗೊಂಡಿದೆ. ಈ ಟೀಸರ್ ನೋಡಿದ ಅನೇಕರಿಗೆ ಇದು ಡ್ರಗ್ಸ್ ಬಗ್ಗೆ ಇರೋ ಸಿನಿಮಾ ಅನ್ನೋದು ಗೊತ್ತಾಗಿದೆ. ಇದರಲ್ಲಿ ಭರ್ಜರಿ ಆ್ಯಕ್ಷನ್ ಕೂಡ ಇರಲಿದೆ ಎನ್ನಲಾಗಿತ್ತು. ಅನೇಕರಿಗೆ ಯಶ್ ಅವರ ಲುಕ್ ಹೇಗಿರಲಿದೆ ಎನ್ನುವ ಪ್ರಶ್ನೆ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ.

ಯಶ್ ಅವರು ತಲೆಕೂದಲನ್ನು ಶಾರ್ಟ್ ಮಾಡಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ಸಿನಿಮಾದಲ್ಲಿ ಇದ್ದಷ್ಟು ಉದ್ದನೆಯ ಕೂದಲು ಇಲ್ಲ. ಅವರ ಗಡ್ಡ ಹಾಗೆಯೇ ಇದೆ. ಅವರ ಗಡ್ಡದ ಲುಕ್ ಸ್ವಲ್ಪ ಬದಲಾಗಿದೆ. ಅವರನ್ನು ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಯಶ್​ಗೆ ರಾಧಿಕಾ ಪಂಡಿತ್ ಕೂಡ ಸಾಥ್ ನೀಡಿದ್ದಾರೆ.

Leave a Reply

Your email address will not be published. Required fields are marked *