ಮಂಗಳೂರು:(ಜು.14) ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ, ಬುರ್ಖಾ ಧರಿಸಿ ಆ್ಯಸಿಡ್ ಎರಚಿ ಚಿನ್ನಾಭರಣ ದೋಚಲು ಯತ್ನಿಸಿದ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿ 15 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ:https://uplustv.com/2024/07/14/kanyadi-ಮಂಗಳೂರಿನಲ್ಲಿ-ರಾಜ್ಯ-ಸಚಿವೆ-ಲಕ್ಷ್ಮೀ
ಬಂಧಿತ ಆರೋಪಿಗಳನ್ನು ಬಜ್ಪೆ ಶಾಂತಿಗುಡ್ಡೆ ನಿವಾಸಿ ಪ್ರೀತೇಶ್ ಅಲಿಯಾಸ್ ಪ್ರೀತು (31) , ಸುರತ್ಕಲ್ ಕೋಡಿಕೆರೆ ನಿವಾಸಿ ಧನರಾಜ್ ಅಲಿಯಾಸ್ ಧನು (30) ಮತ್ತು ಬಾಳ ಕುಂಬಳಕೆರೆ ನಿವಾಸಿ ಕುಸುಮಾಕರ ಅಲಿಯಾಸ್ ಅಣ್ಣು (37) ಎಂದು ತಿಳಿದಿದೆ.
ಜು.4ರಂದು ಸಂಜೆ ಬಜ್ಪೆ ಪಟ್ಟಣದ ಹೃದಯಭಾಗದಲ್ಲಿರುವ ಬಜ್ಪೆ ಫೈನಾನ್ಸ್ ಕಚೇರಿಗೆ ಮೂವರು ಬುರ್ಖಾ ಧರಿಸಿ ನುಗ್ಗಿ ಚಿನ್ನಾಭರಣ ದೋಚಲು ಯತ್ನಿಸಿದ್ದರು. ನಂತರ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜ್ಪೆ ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣಗಳಿವೆ.
ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಯತ್ನ ಪ್ರಕರಣಗಳಿದ್ದು, ಕುಸುಮಾಕರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜ್ಪೆ ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣಗಳಿವೆ.
15 ಲಕ್ಷ ಮೌಲ್ಯದ ಇನ್ನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.