ಮಂಗಳೂರು: (ಜು.15) ದ.ಕ.ಜಿಲ್ಲೆಯಲ್ಲಿ ರವಿವಾರ ಉತ್ತಮ ಮಳೆಯಾಗಿದೆ. ಈ ಮಧ್ಯೆ ಜು.15ರಂದು ಹವಾಮಾನ ಇಲಾಖೆಯು ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಹಿತ 40ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.
ಇದನ್ನೂ ಓದಿ: https://uplustv.com/2024/07/15/ullala-bollywood-family
ನಗರದ ಮಣ್ಣಗುಡ್ಡೆಯ ಗಾಂಧಿ ಪಾರ್ಕ್ ಬಳಿ ಮರವೊಂದು ಉರುಳಿ ಬಿದ್ದಿದೆ. ಪಂಪ್‌ವೆಲ್‌ನಿಂದ ಎಕ್ಕೂರು ಕಡೆಗೆ ಸಾಗುವ ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರದಲ್ಲಿ ವ್ಯತ್ಯಯ ಕಾಣಿಸಿಕೊಂಡಿತು.
ಬಂಟ್ವಾಳದ ತುಂಬೆ ಯಲ್ಲಿ ನೇತ್ರಾವತಿ ನೀರಿನಮಟ್ಟದಲ್ಲಿ ಏರಿಕೆ ಕಾಣಿಸಿಕೊಂಡಿದೆ. ಜಿಲ್ಲೆಯ ದಿನದ ಸರಾಸರಿ ಮಳೆ 34.5 ಮಿ.ಮೀ ಆಗಿದೆ.
ರವಿವಾರ ಬೆಳಗ್ಗಿನವರೆಗೆ ಬೆಳ್ತಂಗಡಿ 43.3 ಮಿಮೀ, ಬಂಟ್ವಾಳ 43.3 ಮಿ.ಮೀ, ಮಂಗಳೂರು 40.8 ಮಿ.ಮೀ, ಉಳ್ಳಾಲ 40.5 ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ದಿನದ ಸರಾಸರಿ ಮಳೆ 34.5 ಮಿ.ಮೀ. ಆಗಿದೆ.
ಕರಾವಳಿಯಲ್ಲಿ ಗಂಟೆಗೆ 35ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.