ಮಂಗಳೂರು:(ಜು.15) ರಾಜ್ಯದಲ್ಲಿ ಉಚಿತ ಬಸ್ ಯೋಜನೆ ಬಂದ ಮೇಲೆ KSRTC ನಿಗಮ ಅಂತೂ ನಷ್ಟದಲ್ಲಿರುವುದು ಎಲ್ಲರಿಗೆ ತಿಳಿದ ವಿಚಾರ, ಹಲವು ಕಡೆ ರಸ್ತೆ ಮಧ್ಯೆ ಡೀಸೆಲ್ ಖಾಲಿಯಾಗಿ ಬಾಟಲಿ ಅಲ್ಲಿ ತುಂಬಿಸುವುದು ಕಳೆದ ಒಂದು ವರ್ಷದಲ್ಲಿ ಅಲ್ಲಲ್ಲಿ ಕಂಡುಬರುತ್ತಿದೆ.
ಹಾಲು, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಈಗ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬರೆ ಬಿದ್ದಿದೆ. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿಲ್ಲ.
ಇದನ್ನೂ ಓದಿ: https://uplustv.com/2024/07/15/ujire-tapta-mudradharana
ಈಗ ಟಿಕೆಟ್ ದರ ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ಉಳಿಗಾಲವಿಲ್ಲ. ಹೀಗಾಗಿ, ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ಈ ಕುರಿತು ಗುಬ್ಬಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದ ಅವರು, ಕಳೆದೆರೆಡು ದಿನಗಳ ಹಿಂದೆ ಕೆಎಸ್‌ಆರ್‌ಟಿಸಿ ಬೋರ್ಡ್ ಮೀಟಿಂಗ್ ಮಾಡಲಾಗಿದ್ದು, ಅದರಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಬಗ್ಗೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಹಿಂದೆ ಹಿಂದೆ 2019 ರಲ್ಲಿ ಬಸ್ ಟಿಕೇಟ್ ದರ ಹೆಚ್ಚಳ ಆಗಿತ್ತು.
ಆದರೆ, ಇಲ್ಲಿ ತನಕ ಟಿಕೆಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿದೆ. ತೈಲ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.
ಕಳೆದ ಒಂದು ವರ್ಷಗಳಿಂದ ಕೆಎಸ್‌ಆರ್‌ಟಿಸಿ ನಷ್ಟದಲ್ಲಿದೆ. ಇನ್ನು ಕೆಎಸ್‌ಆರ್‌ಟಿಸಿ ನೌಕರರಿಗೆ ಸಂಬಳ ಹೆಚ್ಚಳ ಮತ್ತು ಇತರೆ ಸವಲತ್ತುಗಳನ್ನು ಕೊಡಬೇಕಾದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ.
2020ರಲ್ಲಿಯೇ ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ ಮಾಡಬೇಕಿತ್ತು. ನೌಕರರ ವೇತನ ಪರಿಷ್ಕರಣೆ 2020ರಲ್ಲಿ ಮಾಡಬೇಕಿತ್ತು. ಇಲ್ಲಿ ತನಕ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡ್ತಿವಿ. ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ.
ಕಾಲಕಾಲಕ್ಕೆ ಹೆಚ್ಚಳ ಮಾಡಿದ್ರೆ ಹೀಗೆಲ್ಲ ಆಗ್ತಿರಲಿಲ್ಲ. ಕಳೆದ ತ್ರೈ ಮಾಸಿಕದಲ್ಲಿ ಕೆಎಸ್ಆರ್ಟಿಸಿಗೆ 295 ಕೋಟಿ ನಷ್ಟ ಆಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಈಗಾಗಲೆ 600 ಸಾಮಾನ್ಯ ಬಸ್‌ಗಳನ್ನು ಕೊಂಡುಕೊಳ್ಳಲಾಗಿದೆ. 15%-20 ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.