Sat. Dec 14th, 2024

Ullala: Bollywood family and famous cricketer participated in Kuttaru Koragajjana Katteya Kola.

ಉಳ್ಳಾಲ:(ಜು.15) ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ

ಇದನ್ನೂ ಓದಿ: https://uplustv.com/2024/07/15/mangalore-a-huge-fire-accident-in-mangalore-msez

ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು.

ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.

ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ.

ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು.

ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು