Wed. Dec 4th, 2024

Daily Horoscope : Loss in business is possible for this zodiac sign today!! So what is the result of other 11 Rasis?

ಮೇಷ ರಾಶಿ :ಇಂದು ಒಂದೇ ಕಾರ್ಯವನ್ನು ಮತ್ತೆ ಮಾಡಬೇಕಾಗುವುದು. ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ಅತಿಯಾದ ಆಸೆಯಿಂದ ನೀವು ವ್ಯಾಪಾರದಲ್ಲಿ ಅಪಾಯವನ್ನು ತಂದುಕೊಳ್ಳುವಿರಿ.

ವೃಷಭ ರಾಶಿ :ನಿಮ್ಮ ನಿಶ್ಚಿತವಾದ ಯೋಜನೆಯನ್ನು ಬದಲಾಯಿಸುವಿರಿ. ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗುವ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಸಂಗಾತಿಯನ್ನು ಕಂಡುಕೊಂಡಂತೆ ಕಾಣಿಸಬಹುದು.

ಮಿಥುನ ರಾಶಿ :ನಿಮ್ಮ ಬಗ್ಗೆ ಅಪರಿಚಿತರು ಪ್ರೀತಿ ತೋರಿಸಿದರೆ ಮುಜುಗರವಾಗುವುದು. ಯಾರನ್ನೇ ಆದರೂ ಅವರನ್ನು ಒಂದು ಹಂತದವರಗೆ ಮಾತ್ರ ಒಳಗೆ ಕರೆಯುವುದು ಸೂಕ್ತ. ನಿಮ್ಮ ಪ್ರಣಯ ಜೀವನವು ಉತ್ತಮವಾಗಿ ಬದಲಾಗಬಹುದು. ನಿಮ್ಮ ಪ್ರಣಯವು ಸಂಗಾತಿಯ ಜೊತೆ ಅಭಿವ್ಯಕ್ತವಾಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ :ಇಂದು ನಿಮ್ಮ ಪ್ರೇಮವು ಸ್ನೇಹಿತರ ಮೂಲಕ ಸಫಲವಾಗುವುದು. ಕೆಲಸದ ಸ್ಥಳದಲ್ಲಿ ಹಿರಿಯರು ಮಾರ್ಗದರ್ಶನ ಪಡೆಯಿರಿ. ಸಹೋದರರ ಸಹಾಯದಿಂದ ನಿಮ್ಮ ವೃತ್ತಿಪರ ಯಶಸ್ಸಿಗೆ ಕಾರಣವಾಗುವುದು. ಹಠದಿಂದ ಯಾವ ಕಾರ್ಯವನ್ನೂ ಮಾಡಲು ಹೋಗುವುದು ಬೇಡ. ತಪ್ಪಾದರೆ ಎಲ್ಲರೂ ಆಡಿಕೊಳ್ಳುವರು.

ಸಿಂಹ ರಾಶಿ :ಇಂದು ನೀವು ನಿಶ್ಚಿಂತೆಯಿಂದ ವೃತ್ತಿಯಲ್ಲಿ ತೊಡಗಿಕೊಳ್ಳುವಿರಿ. ಕುಟುಂಬದಲ್ಲಿ ನಡೆಯಲಿರುವ ವಿವಾಹ ಕಾರ್ಯದ ಓಡಾಟವಿರುವುದು. ಇಂದು ನೀವು ಉತ್ತಮ ಆರ್ಥಿಕ ಪ್ರಗತಿಯನ್ನು ಹೊಂದಿದ್ದು, ನೀವು ಹೇಳಿದ ರೀತಿಯಲ್ಲಿಯೇ ಎಲ್ಲವೂ ನಡೆಯುವುದು.

ಕನ್ಯಾ ರಾಶಿ :ನೀವು ಇಂದು ಆಪ್ತರನ್ನೇ ದ್ವೇಷಿಸುವಿರಿ. ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು. ದಿನದ ಆರಂಭದಲ್ಲಿ ಗಮನಾರ್ಹ ಹಣಕಾಸಿನ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಬಹುದು. ಅಪರಿಚಿತರ ಒಡನಾಟವು ಹೊಸ ದಿಕ್ಕಿನ ಕಡೆ ಕರೆದೊಯ್ಯುವುದು.

ತುಲಾ ರಾಶಿ : ಇಂದು ಅವಸರದಲ್ಲಿ ಉದ್ಯೋಗದ ತೀರ್ಮಾನವನ್ನು ನೀವು ತೆಗೆದುಕೊಳ್ಳಬೇಡಿ. ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟವಾಗುತ್ತದೆ. ಮಕ್ಕಳಿಂದ ನೆಮ್ಮದಿಯು ನಿಮಗೆ ಸಿಗುತ್ತದೆ. ಇಂದು ವ್ಯಾಪಾರಸ್ಥರಿಗೆ ಸ್ವಲ್ಪ ನಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಸುಧಾರಿತ ಆರ್ಥಿಕ ಸ್ಥಿತಿಯು ನಿಮಗೆ ಹೆಚ್ಚು ಸುಖವನ್ನು ಉಂಟುಮಾಡುತ್ತದೆ.

ವೃಶ್ಚಿಕ ರಾಶಿ : ಇಂದು ಸ್ನೇಹಿತರಿಂದ ನಿಮಗೆ ಬೇಕಾದ ಸಲಹೆಯನ್ನು ಪಡೆಯುವಿರಿ. ಆದಾಯವನ್ನು ಉತ್ತಮ ಮಾಡಿಕೊಳ್ಳುವಿರಿ. ಒತ್ತಡ ತರುವ ಕೆಲಸದಿಂದ ವಿರಾಮವನ್ನು ಪಡೆಯಬೇಕಾದೀತು.

ಧನು ರಾಶಿ :ಇಂದು ಸಿಟ್ಟಿನ ಭರದಲ್ಲಿ ನೀವು ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ನಿಮ್ಮ ಅಜ್ಞಾನದಿಂದ ನಷ್ಟವಾಗದಂತೆ ಎಚ್ಚರ ವಹಿಸಿ. ಹಿಂದಿನ ಕೆಲವು ಹಣಕಾಸಿನ ಸಮಸ್ಯೆಗಳು ಮತ್ತೆ ಕಾಣಿಸಿಕೊಳ್ಳಬಹುದು.

ಮಕರ ರಾಶಿ : ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು. ನಿಮ್ಮ ಕೆಲಸ ಮತ್ತು ವೈಯಕ್ತಿಕ ಜೀವನದಲ್ಲಿ ಏರಿಳಿತದ ಜೊತೆ, ಅಸ್ತವ್ಯಸ್ತವಾಗಬಹುದು. ಭವಿಷ್ಯದ ಬಗ್ಗೆ ಈ ದಿನವನ್ನು ಆನಂದಿಸಲು, ನೀವು ಮೊದಲು ಜವಾಬ್ದಾರಿಗಳನ್ನು ಪೂರೈಸುವತ್ತ ಗಮನ ಹರಿಸಬೇಕು.

ಕುಂಭ ರಾಶಿ :ಹೂಡಿಕೆಯ ಕಾರಣದಿಂದ‌ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು‌ ಮರುಕಳಿಸಬಹುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಉತ್ತಮ ಸಂಬಂಧಗಳು ಇರಲಿದೆ. ನಿಮ್ಮ ಸಂವಹನಕ್ಕೆ ವಿವಿಧ ಮಾರ್ಗಗಳನ್ನು ಹುಡುಕುವಿರಿ. ಒಳ್ಳೆಯ ಸಮಯವನ್ನು ಒಟ್ಟಿಗೆ ಕಳೆಯಿರಿ ಮತ್ತು ಪರಸ್ಪರರ ಭಾವನೆಗಳನ್ನು ಗ್ರಹಿಸಲು ಪ್ರಯತ್ನಿಸಿ.

ಮೀನ ರಾಶಿ : ವ್ಯವಹಾರವು ಅಂದುಕೊಂಡಷ್ಟು ಸಾಧಿಸಲಾಗದೇ ಇಂದು ಬೇಸರವಾಗಬಹುದು. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೀವು ಸರಿಯಾದ ವಿಧಾನವನ್ನು ಆಯ್ಕೆ ಮಾಡುವಿರಿ. ಉಜ್ವಲ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು, ನೀವು ಉಪಕ್ರಮವನ್ನು ತೆಗೆದುಕೊಳ್ಳಬಹುದು.

Leave a Reply

Your email address will not be published. Required fields are marked *