

ಬೆಂಗಳೂರು:(ಜು.20) ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ:https://uplustv.com/2024/07/20/ujire-ಉಜಿರೆ-ಮಹಾ-ಶಕ್ತಿ-ಕೇಂದ್ರದ-ಯುವಮೋರ್ಚಾ

ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಹತ್ತಿರ ರಾತ್ರಿ ವೇಳೆ ಈ ಘಟನೆ ನಡೆದಿದೆ.

ಚಾಲಕ ಒಬ್ಬನೇ ಕಿಯಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ಇಳಿದಿದ್ದಾನೆ.

ಅದೃಷ್ಟವಶಾತ್ ಆವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬಂದು ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.