Fri. Apr 4th, 2025

Udupi: ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ಭೇಟಿ

ಉಡುಪಿ:(ಜು.21) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,

ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮಕ್ಕೆ ಜು. 21 ರಂದು ಭಾನುವಾರ ಭೇಟಿ ನೀಡಿ, ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು.

ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್,

ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *