Tue. Apr 15th, 2025

Belal: ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು:(ಜು.22) “ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ” ಎಂಬ ಯೋಜನೆಯಡಿಯಲ್ಲಿ , ಜುಲೈ 21 ರಂದು ಗ್ರಾಮ ಪಂಚಾಯತ್ ಬೆಳಾಲು, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ರಿ. ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಇದನ್ನೂ ಓದಿ: https://uplustv.com/2024/07/22/belthangadi-ಕರಾವಳಿಯಲ್ಲಿ-ಭಾರೀ-ಮಳೆಗೆ-ಗುಡ್ಡ-ಕುಸಿತ

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು. ಶಿಬಿರದ ನಿರ್ದೇಶಕರಾದ ಮುರಳೀಧರ ಸಿ.ಎಚ್. ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ಇವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Leave a Reply

Your email address will not be published. Required fields are marked *