ನವದೆಹಲಿ (ಜುಲೈ 23) : ಹೊಸದಾಗಿ ಉದ್ಯೋಗಕ್ಕೆ ಸೇರುವ 30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್ ಅನ್ನು ಕೇಂದ್ರ ಸರ್ಕಾರವೇ ನೀಡಲಿದೆ ಎನ್ನುವ ಮಾಹಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2024-25ನೇ ಕೇಂದ್ರ ಬಜೆಟ್ ಮಂಡನೆ ಮಾಡಿರುವ ಸೀತಾರಾಮನ್, ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ.
ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯು ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಸಹಾಯವನ್ನು ಪಡೆಯಲಿದ್ದಾರೆ.ಇಪಿಎಫ್‌ಒನಲ್ಲಿ ನೋಂದಾಯಿಸಿದ ಜನರಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ.
ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ದೇಶದಲ್ಲಿ ಮಹಿಳಾ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು.