ನವದೆಹಲಿ ( ಜುಲೈ 23) : 2024-25 ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿ ಕೂಡಾ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಉದ್ಯೋಗ ಸೃಷ್ಟಿಗಾಗಿ ಶಿಪಿಂಗ್ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಸರಕಾರದಿಂದ 12 ಇಂಡಸ್ಟ್ರಿಯಲ್ ಹಬ್ ಗಳಿಗೆ ಮಂಜೂರಾತಿ ನೀಡುವ ಭರವಸೆ ನೀಡಲಾಗಿದೆ. ಮಹಿಳೆಯರ ಉದ್ಯೋಗಕ್ಕೆ ಆದ್ಯತೆ ನೀಡಲಾಗಿದ್ದು ಕೌಶಲ್ಯಾಭಿವೃದ್ಧಿಗೆ ಮತ್ತು ಉದ್ಯೋಗ ಕ್ಷೇತ್ರಕ್ಕೆ 1.48 ಲಕ್ಷ ಕೋಟಿ ಅನುದಾನ ಒದಗಿಸಲಾಗಿದೆ. ಸ್ಟಾರ್ಟ್ ಅಪ್ ಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.