Sat. Dec 7th, 2024

Belagavi: ಖಾಸಗಿ ಶಾಲಾ ವಾಹನ ಪಲ್ಟಿ – 4 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬೆಳಗಾವಿ:(ಜು.24) ಶಾಲಾ ವಾಹನವೊಂದು ಪಲ್ಟಿ ಹೊಡೆದು ನಾಲ್ಕು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಇದನ್ನೂ ಓದಿ: https://uplustv.com/2024/07/24/chitradurga-ವಿದ್ಯುತ್-ತಂತಿಯಲ್ಲಿ-ಸಿಲುಕಿದ್ದ-ಪಾರಿವಾಳದ

ಖಾಸಗಿ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿದೆ. ಮರಡಿಮಠ ಗ್ರಾಮದ ಜೈ ಹನುಮಾನ್‌ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ಸು ಇದಾಗಿದೆ.

ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ, ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದರಲ್ಲಿ ಎಲ್‌ಕೆಜಿಯಿಂದ 8 ನೇತರಗತಿಯವರೆಗೆ ಮಕ್ಕಳಿಗೆ ಸಣ್ಣ- ಪುಟ್ಟ ಗಾಯಗಳಾಗಿದೆ. ಆದ್ರೆ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗೋಕಾಕ್ ಗ್ರಾಮದ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *