ಶಿರೂರು:(ಜು.24) ಹೊರುವವರಿಲ್ಲದೆ, ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ.
ಇದನ್ನೂ ಓದಿ: https://uplustv.com/2024/07/24/shiruru-hill-collapse-ಲಾರಿ-ಚಾಲಕ-ಅರ್ಜುನ್-ಕುಟುಂಬದಿಂದ
ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.
ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.
ನೀರು ಚಿಮ್ಮುತ್ತಿದ್ದಂತೆ ಬಾಂಬ್‌ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ ಶೋಧ ಮುಂದುವರಿದಿದೆ.