

ಬೆಳ್ತಂಗಡಿ:(ಜು,29) ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು
ಇದನ್ನೂ ಓದಿ: https://uplustv.com/2024/07/29/kanyadi-ಕನ್ಯಾಡಿ-ಸರ್ಕಾರಿ-ಶಾಲೆಗೆ-ಹಸಿರು-ನೈರ್ಮಲ್ಯ-ಅಭ್ಯುದಯ-ಪ್ರಶಸ್ತಿ


ಮಾನ್ಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ,

ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ,

ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್,

ರಾಷ್ಟ್ರೀಯ ಹೆದ್ದಾರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಸಹಾಯಕ ಅಭಿಯಂತರರಾದ ಕೀರ್ತಿ, ಗುರುಪ್ರಸಾದ್ ಉಪಸ್ಥಿತರಿದ್ದರು.