ಬೆಳ್ತಂಗಡಿ :(ಜು.29) ಬೈಕಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಘಟನೆಯಲ್ಲಿ ಬಾಲಕಿ ಸಾವನ್ನಪ್ಪಿ, ಬಾಲಕಿಯ ತಂದೆ ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಇದೀಗ ಬೊಲೆರೋ ಚಾಲಕನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ: https://uplustv.com/2024/07/29/bengaluru-ಕುಮಾರಸ್ವಾಮಿ-ಮೂಗಿನಲ್ಲಿ-ಏಕಾಏಕಿ-ರಕ್ತಸ್ರಾವ-ಅಪೋಲೋ-ಆಸ್ಪತ್ರೆಗೆ-ದಾಖಲು
ಜು.27ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ತನ್ನ ಮಗಳಾದ 5 ನೇ ತರಗತಿ ವಿದ್ಯಾರ್ಥಿನಿ ಅನರ್ಥ್ಯ(11)ಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಮುಂಡಾಜೆ ಕಡೆ ಹೋಗುತ್ತಿದ್ದರು.
ಆಗ ಹಿಂಬದಿಯಿಂದ ಮದ್ಯ ಸೇವಿಸಿ ಅಜಾಗರೂಕತೆಯಿಂದ ಬೊಲೆರೋ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನು ಮುಂದಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಅಲ್ಲದೇ ಬೈಕ್ ಸಮೇತ ಕೆಲ 30 ಮೀಟರ್ ದೂರ ಎಳೆದುಕೊಂಡು ಹೋಗಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಅರ್ಧ ಕಿ.ಮೀ. ಸಾಗುವಷ್ಟರಲ್ಲಿ ಬೊಲೆರೋ ವಾಹನವನ್ನು ತಡೆದು ನಿಲ್ಲಿಸುವಲ್ಲಿ ಸಾರ್ವಜನಿಕರು ಯಶಸ್ವಿಯಾಗಿದ್ದರು.
ಘಟನೆಯಲ್ಲಿ ಬೈಕಿನಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಬಾಲಕಿಯ ತಂದೆ ಗುರುಪ್ರಸಾದ್ ಗೋಖಲೆಗೆ ಗಂಭೀರ ಗಾಯವಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿ ಬೊಲೆರೊ ಚಾಲಕ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಪ್ರಶಾಂತ್ (31ವ) ವಿರುದ್ಧ ಜು.28 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 105,125A BNS, 134A&B, IMV Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ಬೊಲೆರೊ ಚಾಲಕ ಆರೋಪಿ ಪ್ರಶಾಂತ್ ನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು ಜು.28 ರಂದು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದಾರೆ.
ಈ ವೇಳೆ ಬೆಳ್ತಂಗಡಿ ನ್ಯಾಯಾಧೀಶರು ಬೊಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ.