Wed. Apr 16th, 2025

Bengaluru: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟವರಿಗೆ ಶಾಕ್ ಕೊಟ್ಟ ಖಾಸಗಿ ಬಸ್ಸುಗಳು – ಖಾಸಗಿ ಬಸ್ ಟಿಕೆಟ್ ದರ ಎಷ್ಟಿದೆ ಗೊತ್ತಾ?

ಬೆಂಗಳೂರು(ಜು.29): ಬೆಂಗಳೂರು – ಮಂಗಳೂರು ನಡುವಣ ರೈಲು ಸಂಚಾರ ಸ್ಥಗಿತಗೊಂಡಿರುವುದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ತೆರಳುವ ಭಕ್ತರ ಸಂಕಷ್ಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ: https://uplustv.com/2024/07/29/chennai-ಊಟದಲ್ಲಿ-ಉಪ್ಪಿನಕಾಯಿ-ಇಲ್ಲದ್ದಕ್ಕೆ-ಹೋಟೆಲ್-ಗೆ-ದಂಡ-ವಿಧಿಸಿದ-ಕೋರ್ಟ್

ಖಾಸಗಿ ಬಸ್​​ಗಳು ಬೇಕಾಬಿಟ್ಟಿಯಾಗಿ ಟಿಕೆಟ್​​ ದರ ನಿಗದಿಪಡಿಸುತ್ತಿದ್ದು, ಪರಿಣಾಮವಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಕಡೆ ತೆರಳುವ ಬಸ್ ಟಿಕೆಟ್ ದರ ದುಪ್ಪಟ್ಟು ಹಾಗೂ ಅದಕ್ಕಿಂತಲೂ ಹೆಚ್ಚಾಗಿರುವುದು ಗೊತ್ತಾಗಿದೆ.

ರಾಜ್ಯಾದ್ಯಂತ ಭಾರಿ ಮಳೆಯಿಂದ ಹಲವಡೆ ಭೂಕುಸಿತವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲು ಹಳಿ ಇರುವ ಜಾಗದಲ್ಲಿ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ. ಒಟ್ಟಾರೆಯಾಗಿ 14 ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಖಾಸಗಿ ಬಸ್ ಟಿಕೆಟ್ ದರ ಎಷ್ಟಿದೆ?
ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಟಿಕೆಟ್​ ದರ ದುಪ್ಪಟ್ಟಾಗಿದ್ದು, ಕೆಲವು ಬಸ್​​ಗಳಂತೂ ಎರಡ್ಮೂರು ಪಟ್ಟು ದರ ಏರಿಕೆ ಮಾಡಿವೆ. ಉಭಯ ನಗರಗಳ ಮಧ್ಯೆ ಬಸ್ ಪ್ರಯಾಣಕ್ಕೆ 500-600 ರೂ. ಇದ್ದ ಟಿಕೆಟ್ ದರ ಈಗ 1000 ರೂ.ನಿಂದ 1,200 ರೂ.ಗೆ ಏರಿಕೆಯಾಗಿದೆ.

ಎಸಿ ಬಸ್ ಟಿಕೆಟ್​​ ದರ 2000 ರೂ.ನಿಂದ 4000 ರೂ.ಗೆ ಏರಿಕೆಯಾಗಿದೆ. ಪರಿಣಾಮವಾಗಿ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಕಡೆ ಹೊರಟ ಜನರಿಗೆ ತೊಂದರೆಯಾಗಿದೆ.

Leave a Reply

Your email address will not be published. Required fields are marked *