Wed. Nov 20th, 2024

Kanyadi: ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

ಕನ್ಯಾಡಿ: (ಜು.29) ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದರು.

ಇದನ್ನೂ ಓದಿ: https://uplustv.com/2024/07/29/mangalore-ಮಂಗಳೂರು-ಪೊಲೀಸರಿಂದ-ಆಟಿದ-ಕೂಟ-ಆಚರಣೆ

ಅದರಲ್ಲಿ ಆಯ್ದ 100 ಶಾಲೆಗಳಿಗೆ ಮಾತ್ರ ಈ ಪ್ರಶಸ್ತಿ ನೀಡುವುದಾಗಿ ತಿಳಿಸಿದರು. ಅದರಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ – 2 ಧರ್ಮಸ್ಥಳ ಆಯ್ಕೆ ಆಗಿರುವುದು ಬೆಳ್ತಂಗಡಿ ತಾಲೂಕಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಶಿಕ್ಷಕಿ ಶಾರದ ಜಿ ಇವರು ಜುಲೈ 27ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ದಿವ್ಯ ಸಾನಿಧ್ಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.


ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನು ಹೊಂದಿದೆ
.

Leave a Reply

Your email address will not be published. Required fields are marked *