Sat. Dec 14th, 2024

Karkala: ಟಿಪ್ಪರ್ – ಬೈಕ್ ಢಿಕ್ಕಿ – ಯುವಕ ಸ್ಪಾಟ್ ಡೆತ್.!

ಕಾರ್ಕಳ :(ಜು.29) ಟಿಪ್ಪರ್ ಮತ್ತು ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರ್ಕಳ ಪುಕ್ಕೇರಿ ಬಳಿಯ ಫುಡ್ ಬಾಸ್ಕೆಟ್ ಮುಂಭಾಗದಲ್ಲಿ ನಡೆದಿದೆ.

ಇದನ್ನೂ ಓದಿ: 🔶ಬೆಳ್ತಂಗಡಿ: ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ನೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಮೃತ ಯುವಕನನ್ನು ಬೈಪಾಸ್ ನಿವಾಸಿ, ಕಾರ್ ಮೆಕ್ಯಾನಿಕ್ ನಿಝಾಮ್ (21 ವ) ಎಂದು ತಿಳಿದುಬಂದಿದೆ.

ಸಾಣೂರಿನಿಂದ ಕೆಲಸಕ್ಕೆಂದು ಬೆಳಗ್ಗೆ 10:30 ರ ಸುಮಾರಿಗೆ ಕಾರ್ಕಳ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಅತಿವೇಗದಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರ್ಕಳದಿಂದ ಬೈಪಾಸ್ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಬೈಪಾಸ್ ನಿಂದ ಕಾರ್ಕಳದತ್ತ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ನಿಝಾಮ್ ಟಿಪ್ಪರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಮೃತದೇಹವನ್ನು ಕಾರ್ಕಳ ಸರ್ಕಾರಿ ಮೃತದೇಹ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ತಂದೆ ಇಯ್ತಿಯಾಜ್, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು