Wed. Nov 20th, 2024

Kundapur: ಸ್ವಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಬಂದ ಅಪರಿಚಿತ ತಂಡ – ಸಿಸಿಟಿವಿಯ ಲೈವ್‌ ವೀಕ್ಷಣೆ ಮೂಲಕ ಘಟನೆ ಬೆಳಕಿಗೆ

ಕುಂದಾಪುರ:(ಜು.29) ಬೆಳ್ಳಂಬೆಳಗ್ಗೆ ಎರಡು ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದ ಅಪರಿಚಿತರ ತಂಡವೊಂದು ಊರಿನಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ. ಈ ತಂಡದ ವರ್ತನೆ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಕೋಟ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: https://uplustv.com/2024/07/30/daily-horoscope-ಇಂದು-ಈ-ರಾಶಿಯವರಿಗೆ-ಅನಿರೀಕ್ಷಿತವಾಗಿ-ವೈವಾಹಿಕ-ಸಂಬಂಧವು-ಕೂಡಿ-ಬರಬಹುದು/

ಘಟನೆ ಬಗ್ಗೆ ದೂರು ನೀಡಿರುವ ಮನೆ ಮಾಲಕಿ ಮಣೂರು ಗ್ರಾಮದ ಕವಿತಾ (34 ವ) ಅವರು, ಜು.25ರಂದು ಬೆಳಗ್ಗೆ 8.30 ಗಂಟೆಗೆ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದ ಶಬ್ದವಾಗಿತ್ತು. ಆಗ ನಿರ್ಲಕ್ಷಿಸಿದ್ದು, 9 ಗಂಟೆಗೆ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ.

ಈ ನಡುವೆ ಮನೆಯ ಸಿಸಿಟಿವಿ ಮೇಲೆ ನಿಗಾ ಇಡುತ್ತಿರುವ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಕೃಷ್ಣ ಅವರು ಕರೆ ಮಾಡಿ, ನಿಮ್ಮ ಮನೆಗೆ ಸ್ವಿಫ್ಟ್‌ ಮತ್ತು ಇನೋವಾ ಕಾರಿನಲ್ಲಿ 6-8 ಜನ ಮಂದಿ ಆಗಮಿಸಿ ಗೇಟು ತೆರೆಯಲು ಯತ್ನಿಸಿದ್ದರು.

ಸಾಧ್ಯವಾಗದಿದ್ದಾಗ ಕಾಂಪೌಂಡ್‌ ಹಾರಿ ಮನೆಗೆ ಬಂದು ಬಾಗಿಲು ಹಾಗೂ ಕಿಟಕಿಯನ್ನು ಬಲಾತ್ಕಾರವಾಗಿ ತೆಗೆಯಲು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ. ಅಪರಿಚಿತರು ಮನೆಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಬಾಗಿಲು ತೆರೆಯಲು ಯತ್ನಿಸಿ, ಗೇಟಿಗೆ ಹಾನಿ ಮಾಡಿ ವಾಪಸ್‌ ಹೋಗಿರುವುದಾಗಿ ತಿಳಿಸಿದ್ದಾರೆ.

ಒಂದು ಕಾರಿನಲ್ಲಿ ಅಧಿಕಾರಿಗಳ ಸೋಗಿನಲ್ಲಿ ಸಫಾರಿ ಧರಿಸಿದ್ದ ಒಬ್ಬ ಹಾಗೂ ಇತರ ನಾಲ್ವರು, ಮತ್ತೂಂದು ಕಾರಿನಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿದ್ದ ಒಬ್ಬ ಹಾಗೂ ಇತರರು ಸೇರಿ ಒಟ್ಟು 8 ಮಂದಿ ಇದ್ದರು ಎಂದು ಶಂಕಿಸಲಾಗಿದೆ.

6 ಜನ ಇರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಳೆಹನಿಯುತ್ತಿದ್ದಾಗ ಕಾರಿನಿಂದ ಇಳಿದ ತಂಡ ಗೇಟು ತೆರೆಯಲು ಯತ್ನಿಸಿದೆ. ಸಾಧ್ಯವಾಗದಿದ್ದಾಗ ಗೇಟಿಗೆ ಗುದ್ದಿ ಸದ್ದು ಮಾಡಿದೆ. ಆ ಬಳಿಕ ಇನ್ನೊಂದು ಮಗ್ಗುಲಿನಿಂದ ಹೋಗಿ ಕಾಂಪೌಂಡ್‌ನಿಂದ ಬಾವಿಕಟ್ಟೆಗೆ ಇಳಿದು ಅಂಗಳಕ್ಕೆ ಹೋಗಿ ಮುಖ್ಯ ಬಾಗಿಲ ಬಳಿ ಹೋಗಿದೆ. ಆಗಲೂ ಬಾಗಿಲು ತೆರೆಯದಿದ್ದಾಗ ತಂಡ ಮರಳಿದೆ.

ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಸಿಬಂದಿ ಉದ್ಯಮಿ ಮನೆಯ ಸಿಸಿಟಿವಿಯ ಲೈವ್‌ ವೀಕ್ಷಣೆ ಮಾಡುತ್ತಿ ದ್ದಾಗ ಎರಡು ವಾಹನಗಳಲ್ಲಿ ಆಗಂತು ಕರು ಆಗಮಿಸಿದ್ದುದು ಗೊತ್ತಾಗಿದೆ. ಕೂಡಲೇ ಸಿಬಂದಿಯು ಮನೆಯವರಿಗೆ ಕರೆ ಮಾಡಿದ್ದು, ಆ ಕರೆಯನ್ನು ಮನೆ ಯವರು ಸ್ವೀಕರಿಸಲಿಲ್ಲ.

ಬಳಿಕ ಸಂಸ್ಥೆಯ ಮಾಲಕ ಕೃಷ್ಣ ಕರೆ ಮಾಡಿದಾಗ ಮನೆಯವರು ಕರೆ ಸ್ವೀಕರಿಸಿದ್ದು, ಮನೆಯ ಹೊರಗಡೆ ನಡೆಯುತ್ತಿರುವ ಸಂಗತಿಯನ್ನು ತಿಳಿಸಿದ್ದಾರೆ. ಆಗಮಿಸಿದ ತಂಡ ಐಟಿ, ಇ.ಡಿ.ಯವರು ಆಗಿರಬಹುದು ಎಂಬ ಅನುಮಾನ ಮನೆಯವರಲ್ಲಿತ್ತು.

Leave a Reply

Your email address will not be published. Required fields are marked *