ಬೆಂಗಳೂರು(ಜು.31): ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ ಉಂಟಾಗಿ , ಹಲವರು ಮೃತಪಟ್ಟಿದ್ದಾರೆ, ಅನೇಕ ಮಂದಿ ನಾಪತ್ತೆಯಾಗಿದ್ದಾರೆ. ಈಗಾಗಲೇ ಎನ್ಡಿಆರ್ಎಫ್, ಸ್ಥಳೀಯ ಪೊಲೀಸರು ಮತ್ತು ಸೈನ್ಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: 🛑ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ – ಅಪಾಯದಿಂದ ಪಾರು
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ ತಂಡ, ಅಗತ್ಯ ಸಾಮಗ್ರಿ ಕಳುಹಿಸಲಾಗುತ್ತಿದೆ” ಎಂದು ದೂರವಾಣಿ ಕರೆ ಮಾಡಿ ಹೇಳಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಹಾಗೆಯೇ ಗಡಿಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಐಎಎಸ್ ಅಧಿಕಾರಿಗಳ ಮೊಬೈಲ್ ಸಂಖ್ಯೆ:
ಸಿ.ಜಾಫರ್-9448355577
ದಿಲೀಶ್ ಶಶಿ – 9556000514
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:
08226-223163
08226-223161
08226-223160
ವಾಟ್ಸಪ್ ಸಂಖ್ಯೆ:
9740942901
ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು ಕಾರಣರಾಗಿ ಎಂದು ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ.