ಮಂಗಳೂರು:(ಆ.1) ಮಂಗಳೂರು ಜಂಕ್ಷನ್ – ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆಯನ್ನು ರೈಲ್ವೆ ಸಚಿವಾಲಯ ತಂದಿದೆ.
ಇದನ್ನೂ ಓದಿ: 🔴Bengaluru India Nano 2024 : ನಾಳೆ ‘ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ’ ಉದ್ಘಾಟನೆ
ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ ಮೇರೆಗೆ ಈ ಬದಲಾವಣೆಯನ್ನು ತರಲಾಗಿದೆ. ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ.
‘ರೈಲ್ವೆ ಸಚಿವಾಲಯವು ತಂದಿರುವ ಈ ಬದಲಾವಣೆಯಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಬಹಳ ಅನುಕೂಲವಾಗಲಿದೆ’ ಎಂದು ಸಂಸದರು ಪ್ರತಿಕ್ರಿಯಿಸಿದ್ದಾರೆ.
ತನ್ನ ಮನವಿಗೆ ಸ್ಪಂದಿಸಿ ಬಹು ಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಾಯಣಿಕರ ಈ ಬೇಡಿಕೆಯನ್ನು ಈಡೇರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಸಂಸದರು ಧನ್ಯವಾದ ಸಲ್ಲಿಸಿದ್ದಾರೆ.