Shimla cloudbrust : (ಆ.1) ದೇಶಾದ್ಯಂತ ರಣಭೀಕರ ಮಳೆಯಾಗುತ್ತಿದೆ, ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: 🔶ಉಜಿರೆ: ನಾಲ್ಕು ದಶಕಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಲೀನಾ ರೀಟಾ ಮೊರಾಸ್ ನಿವೃತ್ತಿ
ಕೇರಳದ ವಯನಾಡ್ ನಂತರ ಇಂದು ಗುರುವಾರ ಮುಂಜಾನೆ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಂಪುರ ಉಪವಿಭಾಗದ ಝಖಾರಿ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪ ಉಂಟಾಗಿದೆ.
ಮೇಘಸ್ಫೋಟದಲ್ಲಿ 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆಗಳು ಕೊಚ್ಚಿಹೋಗಿವೆ. ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹರಕ್ಷಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ನಾಪತ್ತೆಯಾದವರ ಪತ್ತೆಗೆ ಡ್ರೋನ್‌ಗಳನ್ನು ಸಹ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.