Fri. Apr 11th, 2025

Belthangadi: ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳ್ತಂಗಡಿ:(ಆ.2) ಕರ್ನಾಟಕ ಸರಕಾರದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: 🛑ಧರ್ಮಸ್ಥಳ: ಧರ್ಮಸ್ಥಳ-ಪಟ್ರಮೆ ರಸ್ತೆಯ ಕೇಂಕನಾಜೆ ಎಂಬಲ್ಲಿ ವಿದ್ಯುತ್ ತಂತಿಯ ಮೇಲೆ ಬಿದ್ದ ಮರದ ತೆರವು

ಮದ್ದಡ್ಕ ಸಮೀಪದ ಪಡಂಗಡಿ, ಪೊಯ್ಯಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಲಾಯಿಲ, ಗುರುವಾಯನಕೆರೆ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ,

ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷ ಹಾಗೂ ಸದಸ್ಯರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು