ಬೆಳ್ತಂಗಡಿ :(ಆ.2) ಮರೋಡಿ ಗ್ರಾಮದ ಲೆಕ್ಕಾಧಿಕಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆಗಸ್ಟ್ 1 ರಂದು ಅಮಾನತುಗೊಳಿಸಿದ್ದಾರೆ. ಮರೋಡಿ ಗ್ರಾಮದ ಲೆಕ್ಕಾಧಿಕಾರಿ ಶಿವಕುಮಾರ್ ಅವರು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ,
ಇದನ್ನೂ ಓದಿ; 🔴ಮೇಲಂತಬೆಟ್ಟು: ಭಾರೀ ಮಳೆಗೆ ಹಾನಿಗೊಳಗಾದ ಮನೆಗಳಿಗೆ ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ
ಕರ್ತವ್ಯ ಲೋಪ ಎಸೆದಿದ್ದಾರೆ ಎನ್ನುವ ಆರೋಪದ ಮೇರೆಗೆ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ್ದರು.
ಈ ವೇಳೆ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರ ಕಾರ್ಯವೈಖರಿ ಬಗ್ಗೆ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸಾರ್ವಜನಿಕರು ಜಿಲ್ಲಾಧಿಕಾರಿ ಬಳಿ ದೂರನ್ನು ನೀಡಿದ್ರು. ಈ ವೇಳೆ ಜಿಲ್ಲಾಧಿಕಾರಿ ಅಮಾನತು ಮಾಡುವಂತೆ ತಹಶೀಲ್ದಾರ್ ಅವರಿಗೆ ಸೂಚನೆಯನ್ನು ನೀಡಿದರು.