Tue. Apr 8th, 2025

Breaking News: ಪುತ್ತೂರು; ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್

ಪುತ್ತೂರು:(ಆ.2) ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ.

ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು, ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ.

ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣನ್ನು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *