Thu. Dec 5th, 2024

Daily Horoscope – ಇಂದು ಈ ರಾಶಿಯವರಿಗೆ ಲೆಕ್ಕಾಚಾರವೇ ಕಗ್ಗಂಟಾಗಬಹುದು.

Daily Horoscope

ಮೇಷ ರಾಶಿ: ಲೆಕ್ಕಾಚಾರವು ನಿಮಗೆ ಕಗ್ಗಂಟಾಗಬಹುದು. ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಎಲ್ಲರಿಗೂ ತಿಳಿಯಲೂಬಹುದು. ಯಾರನ್ನೂ ಅವಲಂಬಿಸಿರುವುದು ಇಷ್ಟವಾಗದು.

ವೃಷಭ ರಾಶಿ: ಯಾವ ತೊಂದರೆಯನ್ನೂ ಹಂಚಿಕೊಳ್ಳಲಾರಿರಿ .ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವದ ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ಒತ್ತಡವನ್ನು ಕಳೆದುಕೊಳ್ಳುವ ಬಗ್ಗೆ ನಿಮಗೆ ಬೇಸರವಿರುವುದು. ಕಾನೂನಿಗೆ ವಿರುದ್ಧವಾದ ಕೆಲಸದಿಂದ ಹಣವನ್ನು ಪಡೆಯಲು ಹೋಗಬಹುದು.

ಮಿಥುನ ರಾಶಿ: ನಿಧಾನವಾದರೂ ಇಂದಿನ ಕೆಲಸವನ್ನು ಮಾಡಿ.‌ ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ಪಾಲುದಾರಿಕೆಯನ್ನು ನಿಭಾಯಿಸಲು ಕಷ್ಟವಾದೀತು.

ಕಟಕ ರಾಶಿ: ಇನ್ನೊಬ್ಬರನ್ನು ಬೆಳೆಸುವ ಉತ್ಸಾಹ ಯೋಜನೆ ನಿಮ್ಮಲ್ಲಿ ಇರುವುದು. ನೀವು ದುಶ್ಚಟದಿಂದ ದೂರವಿರಲು ಮನಸ್ಸು ಮಾಡುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ.

ಸಿಂಹ ರಾಶಿ: ನಿಮ್ಮ ಸಾಮಾಜಿಕ ಕಾರ್ಯದಿಂದ ಟೀಕೆಗೆ ಗುರಿಯಾಗುವಿರಿ. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಹೊಸ ಕೆಲಸವನ್ನು ಮಾಡಲು ನಿಮಗೆ ಧೈರ್ಯ ಸಾಲದು. ಬುದ್ಧಿವಂತಿಕೆಯ ಕಾರ್ಯವು ನಿಮ್ಮನ್ನು ರಕ್ಷಿಸುವುದು.

ಕನ್ಯಾ ರಾಶಿ: ಆರೋಗ್ಯದ ಕಾಳಜಿಯನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮದಲ್ಲದ‌ ವಸ್ತುವನ್ನು ಪಡೆದಾಗ ಜೋಪಾನ‌ ಮಾಡುವುದು ಅವಶ್ಯಕ. ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ವ್ಯಾಪಾರದಲ್ಲಿ ಇಷ್ಟವಿಲ್ಲದಿದ್ದರೂ ಲಾಭವನ್ನು ನಿರೀಕ್ಷಿಸುವುದು ಬೇಡ.

ತುಲಾ ರಾಶಿ: ನಿಮ್ಮ ಮೇಲೆ ಇತರರ ದೃಷ್ಟಿ ಬೀಳುವ ಸಾಧ್ಯತೆ ಇದೆ. ಇಂದು ಮನಸ್ಸನ್ನು ಕಾರ್ಯದಲ್ಲಿ ನಿಲ್ಲಿಸಲಾಗದು. ನೀವೇ ಆಯ್ಕೆ ಮಾಡಿಕೊಂಡ ಕ್ಷೇತ್ರವು ನಿಮಗೆ ಯಶಸ್ಸನ್ನು ಕೊಡಲಿದೆ. ಶ್ರಮದ ಅವಶ್ಯಕತೆ ಬಹಳ ಇರಲಿದೆ. ನಿಮ್ಮ ಮಾತನ್ನು ಇಂದು ಪೂರ್ಣ ನಂಬಲಾರರು. ಪಾಪಕೃತ್ಯದ ಬಗ್ಗೆ ನಿಮಗೆ ಭಯವು ಬರಬಹುದು.

ವೃಶ್ಚಿಕ ರಾಶಿ: ನಿಮ್ಮ ಬಳಿ ಇರುವ ಸಂಪತ್ತನ್ನು ಸಹಾಯಕ್ಕಾಗಿ ಕೊಟ್ಟು ಕಳೆದುಕೊಳ್ಳುವಿರಿ. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ಅಧಿಕಾರವು ಸಿಕ್ಕ ಮಾತ್ರಕ್ಕೆ ಹೇಗಾದರೂ ಚಲಾಯಿಸಬೇಕೆಂದಿಲ್ಲ. ಯಾರನ್ನೂ ನೀವು ನೇರವಾಗಿ ಹೊಣೆಗಾರಿಕೆ ಮಾಡಲಾರಿರಿ.

ಧನು ರಾಶಿ: ಸ್ವಂತ ಬಲವಿಲ್ಲದೇ ನೀವು ಯಾರನ್ನೂ ಎದುರಿಸಲಾಗದು. ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಣವನ್ನು ಕೊಡಬೇಕಾಗಿ ಬರಬಹುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ಮನೆಯ ರಿಪೇರಿ ಮಾಡಿಸಲಿದ್ದೀರಿ. ಕುಟುಂಬದಲ್ಲಿ ತಾನೇ ಶ್ರೇಷ್ಠ ಎಂಬ ಅಹಂಕಾರ ಬೇಡ. ವೇಗದ ಕಾರ್ಯವನ್ನು ಮಾಡಿ ಎಲ್ಲವನ್ನೂ ಹಾಳುಮಾಡಿಕೊಳ್ಳುವಿರಿ.

ಮಕರ ರಾಶಿ: ಇಂದು ನಿಮ್ಮ ಮನಸ್ಸು ಭಯದಿಂದ ಹಿಂದೇಟು ಹಾಕಬಹುದು. ಸರಿಯಾದ ಬದಲಾವಣೆಯನ್ನು ಹೊಂದಿರಿ. ಯಾರನ್ನೂ ಸಾಧಾರಣ ಮನುಷ್ಯ ತಿಳಿದುಕೊಳ್ಳಬೇಡಿ. ವಿವಾಹದ ಮಾತುಕತೆಯಲ್ಲಿ ನಿಮ್ಮ ಅನರ್ಥದ ಮಾತು ವಿಘ್ನವನ್ನು ತಂದೀತು. ಒಂದೊಂದೇ ಖರ್ಚನ್ನು ನೀವು ನಿಭಾಯಿಸುವಾಗ ಅದೊಂದು ದೊಡ್ಡ ಮೊತ್ತವಾಗಿ ಕಾಣಬಹುದು.

ಕುಂಭ ರಾಶಿ: ಸರ್ಕಾರದ ಉದ್ಯೋಗಕ್ಕೆ ನಿಮ್ಮ ಸಣ್ಣ ಪ್ರಯತ್ನ ಇರಲಿದೆ. ನಿಮ್ಮ ಏಳ್ಗೆಯನ್ನು ಕಂಡು ನಿಮ್ಮವರೇ ಸಂಕಟ ಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಚರಾಸ್ತಿಯನ್ನು ಸ್ಥಿರಾಸ್ತಿ ಮಾಡುವ ಯೋಚನೆ ಮಾಡುವಿರಿ.

ಮೀನ ರಾಶಿ: ಸಜ್ಜನರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ಸಾಕಾರ ಮಾಡಿಕೊಳ್ಳುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲೇ ಬೇಕು ಎಂಬ ದೃಢನಿರ್ಧಾರದಿಂದ ಜೀವನ ಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಆರಂಭಿಸುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು. ಸಾಲ ತೀರಿಸಲು ದೂರದ ಬಂಧುಗಳ ಸಹಾಯ ಹಸ್ತ ಸಿಗಲಿದೆ.

Leave a Reply

Your email address will not be published. Required fields are marked *