Praveen Nettaru Murder: (ಆ.3) ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ ಆರೋಪದಲ್ಲಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರಲ್ಲಿ ಸಾರ್ವಜನಿಕವಾಗಿಯೇ ಪ್ರವೀಣ್ ನೆಟ್ಟಾರ್ ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 19 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಮುಸ್ತಫಾ ಪೈಚಾರ್ ಹತ್ಯೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿದ್ದು, ರಿಯಾಜ್ ಆಶ್ರಯ ನೀಡಿದ್ದರು ಎನ್ನಲಾಗಿದೆ.
ಇದೇ ಆರೋಪದಲ್ಲಿ ಕಳೆದ ತಿಂಗಳು ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗಲೇ ರಿಯಾಜ್‌ನನ್ನು ಮುಂಬಯಿ ಏರ್ ಪೋರ್ಟ್‌ನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು.
ಈಗ ಆತನ ಜತೆಗೆ ಮತ್ತೋರ್ವ ಆರೋಪಿಯ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಕರಣ ಸಂಬಂಧಿಸಿ ಇನ್ನೂ 7 ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.