Wed. Nov 20th, 2024

Venur: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ವೇಣೂರು:(ಆ.5) ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆಯ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಶಿಕ್ಷಕ – ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಜಾತ, ಉಪಾಧ್ಯಕ್ಷರಾಗಿ ವಸಂತ ಮತ್ತು ಭಾಗ್ಯ, ಕೋಶಾಧಿಕಾರಿಯಾಗಿ ಮುರಳಿ ಕೃಷ್ಣ ಭಟ್, ಕಾರ್ಯದರ್ಶಿಯಾಗಿ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಹಾಗೂ 10 ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ: 🛑ಮಂಗಳೂರು: ರಾಜ್ಯದಲ್ಲಿ ಹಗರಣಗಳ ಸರಮಾಲೆಯೊಂದಿಗೆ ದಲಿತ ಬಂಧುಗಳ ಶೋಷಣೆ – ಶಾಸಕ ಕಾಮತ್

ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಾಗೆ ಮೊಬೈಲ್ ಬಳಕೆಯ ದುರುಪಯೋಗದ ಬಗ್ಗೆ ಮನವರಿಕೆ ಮಾಡಿದರು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಹ ಕುಂಭಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಿರೀಶ್ ಕೆ.ಎಚ್ ಹಾಡಿನ ಮೂಲಕ ಪೋಷಕರು ಮತ್ತು ಶಿಕ್ಷಕರ ಕರ್ತವ್ಯವನ್ನು ತಿಳಿಸಿದರು.

ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಕುಮಾರಿ ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯನ್ನು ತಿಳಿಸಿದರು. ಸತತ 11ನೇ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶವನ್ನು ಪಡೆದಿದ್ದು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಗೆ ಬೋಧಿಸಿದಂತಹ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಭೆಯಲ್ಲಿ ಕುಂಭಶ್ರೀ ವೈಭವ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಜಗದೀಶ್ ಮತ್ತು ಗಣೇಶ್ ಕುಂದರ್ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಗೌತಮಿ ಹಾಗೂ ಶ್ವೇತಾ ಅಶೋಕ್ ನಿರೂಪಿಸಿ , ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ವಂದಿಸಿದರು.

Leave a Reply

Your email address will not be published. Required fields are marked *