ಬೆಳಾಲು :(ಆ.6) ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಆ.5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 🔶ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ
ಹತ್ತನೇ ತರಗತಿಯ ಲಿಖಿತ (56 ಕೆಜಿ ವಿಭಾಗ) ಹಾಗೂ ಎಂಟನೇ ತರಗತಿಯ ಜಾಹ್ನವಿ (42 ಕೆಜಿ ವಿಭಾಗ) ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ಚಿನ್ಮಯಿ (45 ಕೆಜಿ ವಿಭಾಗ) ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ದೈಹಿಕ ಶಿಕ್ಷಕರಾದ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.
