Thu. Dec 5th, 2024

Sudeep : ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ ಸುದೀಪ್ – ಕಾರಣ ಏನು ಗೊತ್ತಾ?

ಬೆಂಗಳೂರು:(ಆ.6) ಕಿಚ್ಚ ಸುದೀಪ್ ಅವರು ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ. ಸುದೀಪ್ ಅವರ ಒಳ್ಳೆಯ ಕೆಲಸವನ್ನು ಗಮನಿಸಿ ತುಮಕೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ, ಇದನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಮಾದರಿ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: 💰 Daily Horoscope – ಇಂದು ಈ ರಾಶಿಯವರಿಗೆ ಆಕಸ್ಮಿಕ ಧನದಿಂದ ಸಂತೋಷ

ಕಿಚ್ಚ ಸುದೀಪ್​ಗೆ ಗೌರವ ಡಾಕ್ಟರೇಟ್ ನೀಡಲು ತುಮಕೂರು ವಿವಿ ನಿರ್ಧರಿಸಿತ್ತು. ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಸುದೀಪ್ ಗಮನಕ್ಕೆ ತರಲಾಗಿತ್ತು. ವಿವಿ ನಿರ್ಧಾರಕ್ಕೆ ಹೃದಯಪೂರ್ವಕ ಧನ್ಯವಾದ ತಿಳಿಸಿರುವ ಸುದೀಪ್ ಅವರು, ಇದನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ‘ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಹಿರಿಯರು ಇದ್ದಾರೆ. ಅವರಿಗೆ ಡಾಕ್ಟರೇಟ್ ನೀಡಿ’ ಎಂದು ಸುದೀಪ್ ಕೋರಿದ್ದಾರೆ.

ಪಿಎ ಮುಖಾಂತರ ಮಾಹಿತಿ:
ಮನೋರಂಜನೆ ಹಾಗೂ ನಟನೆಯಲ್ಲಿ ಸುದೀಪ್ ಸಲ್ಲಿಸಿದ ಸೇವೆ ಗುರುತಿಸಿ ಈ ಗೌರವ ನೀಡಲು ನಿರ್ಧರಿಸಿಲಾಗಿತ್ತು. ಈ ಬಗ್ಗೆ ಸುದೀಪ್ ಪಿಎ ಮುಖಾಂತರ ಮಾಹಿತಿ ರವಾನಿಸಲಾಗಿತ್ತು. ಆದರೆ, ಇದನ್ನು ನಿರಾಕರಿಸಿರುವುದಾಗಿ ಸುದೀಪ್ ತಿಳಿಸಿದ್ದರು.

Leave a Reply

Your email address will not be published. Required fields are marked *