Fri. Dec 27th, 2024

Daily Horoscope – ಇಂದು ಈ ರಾಶಿಯವರಿಗೆ ವಿವಾಹ ಭಾಗ್ಯ ಕೂಡಿ ಬರುವುದು!!

Daily Horoscope - ಇಂದು ಈ ರಾಶಿಯವರಿಗೆ ಆತುರವೇ ಅಪಾಯ ತಂದೊಡ್ಡಬಹುದು

ಮೇಷ ರಾಶಿ : ಸ್ವಾವಲಂಬಿಯಾಗುವ ಬಗ್ಗೆ ಚಿಂತನೆ ನಡೆಸುವಿರಿ. ನೀವು ಈಗಲೇ ಮನೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಮರ್ಥರಿಲ್ಲ. ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು‌ ನೀವು ವಿಳಂಬ ಆಗಬಹುದು.

ವೃಷಭ ರಾಶಿ : ಬಹಳ ಹಳೆಯ ಗೆಳೆಯನವಾದರೂ ಹಂಚಿಕೊಳ್ಳುವಷ್ಟು ಆಪ್ತತೆ ಬಾರದು. ಎಲ್ಲ ಶರತ್ತುಗಳಿಗೂ ಸರಿಯಾದ ನಿಬಂಧನೆ ಇರಲಿ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು. ಸಾಹಸ ಮಾಡಲು ಹೋಗುವಾಗ ಎಚ್ಚರವಿರಲಿ. ‌ಮುಖಭಂಗ ಮಾಡಿಕೊಂಡು ಬರಬೇಕಾದೀತು.

ಮಿಥುನ ರಾಶಿ : ಉದ್ಯೋಗದಲ್ಲಿ ಎಲ್ಲಿಗಾದರೂ ಪ್ರಯಾಣ ಮಾಡುವ ಅವಕಾಶ ಬರುವುದು. ಇಂದು ನಿಮ್ಮ ಪ್ರಭಾವವು ಜನರಿಗೆ ತಾನಾಗಿಯೇ ಗೊತ್ತಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಸಿಗದೆಂದು ಮತ್ತೇನನ್ನೋ ಮಾಡಲು ಹೋಗುವುದು ಬೇಡ. ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ಸ್ವಲ್ಪ ವೇಗವನ್ನು ಪಡೆಯು ವುದು.

ಕರ್ಕಾಟಕ ರಾಶಿ : ನಿಮಗೆ ಬೇರೆ ಕಡೆಗಳಿಂದ ಬರಬೇಕಾದ ಹಣವು ಆಕಸ್ಮಿಕವಾಗಿ ಬರಲಿದೆ. ನಿಮ್ಮ ಮಾತಿನಿಂದ ಇಂದು ಆಗಬೇಕಾದ ಕೆಲಸವು ಆಗುವುದು. ನವೀನ ಆಲೋಚನೆಗಳು ಮತ್ತು ಸೃಜನಶೀಲತೆಯೊಂದಿಗೆ ಮಾಡಿದ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಇಂದು ನೀವು ಹೆಚ್ಚು ಶೋಕಿ ಮಾಡಲು ಇಷ್ಟ ಪಡುವಿರಿ.

ಸಿಂಹ ರಾಶಿ : ಅವಿವಾಹಿತರಿಗೆ ವಿವಾಹದ ಚಿಂತೆ ಹೆಚ್ಚಾಗುವುದು. ಇಂದು ನೀವು ಪಿತ್ರಾರ್ಜಿತ ಆಸ್ತಿಯ ಬಗ್ಗೆ ಆಸಕ್ತಿ ಹೊಂದುವಿರಿ.‌ ನಿಮ್ಮ ಪ್ರಭಾವ ಇಂದು ಯಾವ ಕಾರ್ಯಕ್ಕೂ ಸಹಾಯಮಾಡದು. ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳಿ. ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು.

ಕನ್ಯಾ ರಾಶಿ : ಇಂದು ನೀವು ಅನ್ಯಸ್ಥಳದಲ್ಲಿ ಆಕಸ್ಮಿಕವಾಗಿ ವಾಸಮಾಡಬೇಕಾಗುವುದು. ಎಷ್ಟೇ ಎಚ್ಷರವಿದ್ದರೂ ಪ್ರೀತಿಯಲ್ಲಿ ಬೀಳುವ ಸಾಧ್ಯತೆ ಇದೆ.‌ ನೀವು ಏಕಾಗ್ರತೆಯ ಕೊರತೆಯನ್ನು ಅನುಭವಿಸುವಿರಿ. ಕೆಲಸವು ಮಧ್ಯಂತರವಾಗಿ ಮುಂದುವರಿಯುತ್ತದೆ. ಹಣವನ್ನು ಸಾಲವಾಗಿ ಪಡೆದು, ಮರಳಿ ಕೊಡಲು ಆಗದೇಹೋಗಬಹುದು.

ತುಲಾ ರಾಶಿ : ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಬಗ್ಗೆ ಚಿಂತೆ ಹೆಚ್ಚುವುದು. ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುವುದು. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ವೈದ್ಯವೃತ್ತಿಯಲ್ಲಿ ತೊಡಗಿದ್ದರೆ ನಿಮಗೆ ಕೆಟ್ಟ ವಾರ್ತೆಯು ಬರಬಹುದು. ನೌಕರರ ನೋವನ್ನೂ ಕೇಳಬೇಕಾಗಬಹುದು.

ವೃಶ್ಚಿಕ ರಾಶಿ : ಇಂದಿನ ವಿವಾದಗಳು ನಿಮ್ಮ ಮನಸ್ಸನ್ನು ಕೆಡಿಸಬಹುದು.‌ ಇನ್ನೊಬ್ಬರನ್ನು ಸೋಲಿಸುವ ಯೋಚನೆಯಲ್ಲಿ ನೀವು ಇರುವಿರಿ. ನೀವು ಇಂದು ಅಪ್ರಯೋಜಕ ವಿಷಯಗಳ ಕುರಿತು ಹೆಚ್ಚು ಚರ್ಚೆ ಮಾಡುವಿರಿ. ಅಕಾರಣ ಹಾಗೂ ಶೀಘ್ರ ಕೋಪಿಗಳಾಗುವಿರಿ. ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಆತ್ಮೀಯತೆಯು ನಿಮ್ಮ ನಿಲುವನ್ನು ಬದಲಿಸಬಹುದು.

ಧನು ರಾಶಿ : ಯಾರ ಮೇಲೋ ಹಠಸಾಧಿಸುವುದು ಬೇಡ. ನಿಮ್ಮಷ್ಟಕ್ಕೆ ನೀವು ಇರಿ. ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ಮಕ್ಕಳ‌‌ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು.

ಮಕರ ರಾಶಿ : ಏನೋ ಮಾಡಲು ಹೋಗಿ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಈ ದಿನವನ್ನು ಕಳೆಯಲು ನಿಮಗೆ ಕಷ್ಟವಾಗುವುದು. ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು.

ಕುಂಭ ರಾಶಿ : ಇಂದು ನಿಮಗೆ ಆತ್ಮೀಯರ‌ ಒಡನಾಟ ಅಧಿಕವಾಗಲಿದೆ. ನೀವು ಉತ್ತಮ ಸ್ನೇಹಿತರ ಬಳಗವನ್ನು ಹೊಂದಿರುವಿರಿ. ವೃತ್ತಿ ಜೀವನದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ಬಹಳ ದಿನಗಳಿಂದ ನಿಂತ‌ ಕಾರ್ಯಕ್ಕೆ ಚಾಲನೆ‌ ಸಿಗಲಿದೆ.

ಮೀನ ರಾಶಿ : ಇಂದು ಮನೆಯಲ್ಲಿ ನಿಮಗೆ ನಿರಾಸೆಯ ಅನುಭವ ಆಗಬಹುದು. ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು. ನೀವು ಇಂದು ಸಂಪನ್ಮೂಲ‌ ವ್ಯಕ್ತಿಗಳಾಗಿ ನೀವು ಇರುವಿರಿ. ಇಷ್ಟವಾದ ವಸ್ತುಗಳ ಖರೀದಿಯಲ್ಲಿ ಅಶಕ್ತಿ ಅಧಿಕವಾಗುವುದು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ನೀವೇ ನಿರ್ಮಿಸುವಿರಿ.

Leave a Reply

Your email address will not be published. Required fields are marked *