Fri. Apr 11th, 2025

Mangaluru: ಜೋಕಟ್ಟೆಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಬಾಲಕಿಯ ಬರ್ಬರ ಹತ್ಯೆ..!

ಮಂಗಳೂರು :(ಆ.7) ಮಂಗಳೂರು ಪೊಲೀಸ್ ಕಮಿಷನರೇಟ್ ನ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ.

ಇದನ್ನೂ ಓದಿ: 🔴Paris Olympics: ಒಲಿಂಪಿಕ್ಸ್‌ ನಲ್ಲಿ ಫೈನಲ್ ಗೆ ಎಂಟ್ರಿ ಕೊಟ್ಟ ವಿನೇಶ್ ಫೋಗಟ್

ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬುವವರು ವಾಸವಾಗಿದ್ದು, ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು. ಇಂದು ಮಂಗಳವಾರ ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಫೋನ್ ಕೊಡಲು ಹೇಳಿದ್ದಾರೆ.

ಪಕ್ಕದ ಮನೆಯವರು ಫೋನ್ ಕೊಡಲು ಬಾಲಕಿ ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಪತ್ತೆಯಾಗಿದ್ದಳು. ಪಕ್ಕದ ಮನೆಯವರು ತಾಯಿಗೆ ಫೋನಿನಲ್ಲಿ ವಿಷಯ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಫೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದಾರೆ. ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಡಿಸಿಪಿ ದಿನೇಶ್ ಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದು , ಪಣಂಬೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು