Fri. Apr 11th, 2025

Uttara Kannada: ಮುರಿದು ಬಿದ್ದ ಕಾಳಿ ನದಿ ಸೇತುವೆ.!! ನೀರಿಗೆ ಬಿದ್ದ ಲಾರಿ – ಲಾರಿ ಚಾಲಕ ಬದುಕಿದ್ದೇ ರೋಚಕ!!

ಉತ್ತರ ಕನ್ನಡ:(ಆ.7) ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಕುಸಿದು ಬಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: 🛑Sagara: ಭಟ್ಕಳ ದಿಂದ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ ಬೆಂಕಿಗಾಹುತಿ – ಡ್ರೈವರ್‌ ಮಾಡಿದ್ದೇನು ಗೊತ್ತಾ?

ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಸೇತುವೆ ಕುಸಿದಿದ್ದು, ಗೋವಾದಿಂದ ಹುಬ್ಬಳ್ಳಿಗೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಖಾಲಿ ಲಾರಿಯು ಸೇತುವೆಯಿಂದ ಕೆಳಗೆ ಬಿದ್ದಿದೆ. ಬಳಿಕ ಈ ಚಾಲಕ ಲಾರಿಯ ಕ್ಯಾಬಿನ್ ಮೇಲೆ ನಿಂತು ಕೂಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರಾವಳಿ ಕಾವಲುಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಚಾಲಕನನ್ನು ರಕ್ಷಿಸಲಾಗಿದೆ.

ಕಾಳಿ ನದಿಯ ಸೇತುವೆಯು ಮೂರು ಕಡೆಗಳಲ್ಲಿ ಕುಸಿದಿದೆ. ಕಾರವಾರದಿಂದ ಗೋವಾ ಕಡೆಗೆ ತೆರಳುವ ಮೊದಲ ಭಾಗ, ನಂತರ ಮಧ್ಯ ಭಾಗ, ಅದರ ನಂತರ ಗೋವಾದಿಂದ ಕಾರವಾರದ ಕಡೆ ಬರುವ ಪ್ರಾರಂಭದಲ್ಲಿ ಸೇತುವೆಯ ಮೇಲ್ಛಾವಣಿ ಹಾಸು ಕುಸಿದಿದೆ. ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು