Mon. Feb 17th, 2025

Kolar: ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ನವದಂಪತಿ – ವಧು ಸಾವು

ಕೋಲಾರ (ಆ.8): ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ವಧು ಲಿಖಿತ ಶ್ರೀ ಹಾಗೂ ನವೀನ್ ಆಗಸ್ಟ್​​ 07 ರಂದು ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ದುರದೃಷ್ಟವಶಾತ್​ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ವರ ನವೀನ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.

ಮದ್ವೆಯಾಗಿ ಇನ್ನೇನು ಸುಖವಾಗಿ ಸಂಸಾರ ಸಾಗಿಸಬೇಕಿದ್ದ ವಧು ದುರಂತ ಅಂತ್ಯ ಕಂಡಿದ್ದರೆ, ವರ ನವೀನ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಆದ್ರೆ, ಯಾವ ಕಾರಣಕ್ಕೆ ಜೀವ ಹೋಗುವ ಹಾಗೆ ಹೊಡೆದುಕೊಂಡರು ಎನ್ನುವುದು ತಿಳಿದುಬಂದಿಲ್ಲ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರೀತಿಸಿ ಮದುವೆಯಾದ ಜೋಡಿ!!
ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದ ನವೀನ್ ಕೆಲವು ವರ್ಷಗಳಿಂದ ಆಂಧ್ರಪ್ರದೇಶ ರಾಜ್ಯದ ಬೈನಪಲ್ಲಿ ಗ್ರಾಮದ ಲಿಖಿತಶ್ರೀಯನ್ನು ಪ್ರೀತಿಸುತ್ತಿದ್ದನು. ಇಬ್ಬರೂ ಸೇರಿ ಕಷ್ಟಪಟ್ಟು ಮನೆಯವರನ್ನು ಒಪ್ಪಿಸಿ ಗ್ರಾಮದಲ್ಲಿ ಸರಳವಾಗಿ ಮದುವೆಯನ್ನೂ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮದುವೆಯಾದ ಜೋಡಿ ಎಲ್ಲ ಮದುವೆ ಶಾಸ್ತ್ರಗಳು ಮುಕ್ತಾಯಗೊಂಡ ನಂತರ ಒಂದು ಕೋಣೆಯಲ್ಲಿ ಹೋಗಿದ್ದಾರೆ. ಕೆಲ ಹೊತ್ತಿನ ನಂತರ ಕೊಠಡಿಯಲ್ಲಿದ್ದ ಹುಡುಗ ಹುಡುಗಿ ‌ಹೊಡೆದಾಡಿಕೊಂಡಿದ್ದಾರೆ. ನವ ವಧು ವರ ರು ಮನೆಯ ಕೊಠಡಿಯಲ್ಲಿ ಇದ್ದ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇನ್ನು ಗಲಾಟೆಗೆ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು