Toxic :(ಆ.8) ಟಾಕ್ಸಿಕ್ ಸಿನಿಮಾ ಶೂಟಿಂಗ್ ಬಗ್ಗೆ ಯಶ್ ಅವರು ಇಂದು ಬೆಳ್ಳಂಬೆಳಿಗ್ಗೆಯೇ ಅಪ್ಡೇಟ್ ಕೊಟ್ಟಿದ್ದಾರೆ. ‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ.

ಇದನ್ನೂ ಓದಿ: 🛑ಶಿರ್ವ: ಸಿಯಾಳ ತೆಗೆಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಸಾವು
ಟಾಕ್ಸಿಕ್ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು. ಈ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಹಾಗೂ ನಿರ್ಮಾಪಕ ವೆಂಕಟ್ ಕೂಡ ಇದ್ದರು. ಈ ಬೆನ್ನಲ್ಲೆ ಇಂದಿನಿಂದ ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಆರಂಭ ಆಗಿದೆ.

ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ದೊಡ್ಡ ಬಜೆಟ್ನಲ್ಲಿ ಮೂಡಿ ಬರುತ್ತಿದೆ.