ಉಜಿರೆ:(ಆ.8) ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಉಜಿರೆ ಕಡೆಗೆ ತಿರುಗಿಸುತ್ತಿದ್ದ ಬೈಕ್ ನಡುವೆ ಅಪಘಾತವಾದ ಘಟನೆ ಉಜಿರೆಯಲ್ಲಿ ನಡೆದಿದೆ.


ಬೈಕ್ ಸವಾರ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಉಜಿರೆಯಲ್ಲಿ ಕಾಲೇಜು ಡಿವೈಡರ್ ನ ಮಧ್ಯೆ ಬೈಕ್ ತಿರುಗಿಸುವ ವೇಳೆ ಸವಾರನ ನಿಯಂತ್ರಣ ತಪ್ಪಿದ ಕಾರಣ ಹಿಂಬದಿಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.