ಬಾಗಲಕೋಟೆ:(ಆ.9) ಮನೆಯಲ್ಲಿ ತಮ್ಮ ಮದುವೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ19) ಮೃತ ಪ್ರೇಮಿಗಳು. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಸಾವಿನ ಹಾದಿ ಹಿಡಿದಿದೆ.
ಇದನ್ನೂ ಓದಿ: 🐟ಬೆಳ್ತಂಗಡಿ: (ಆ.10 – ಆ.12) ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ “ಮೀನು ಮೇಳ”
ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್, ತಮ್ಮ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.