ಸುಬ್ರಹ್ಮಣ್ಯ:(ಆ.9) ಕುಕ್ಕೆ ಸುಬ್ರಹ್ಮಣ್ಯ ಸೇರಿ ಮಂಗಳೂರಿನ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ ನಡೆಯುತ್ತಿದೆ. ಕುಕ್ಕೆಯಲ್ಲಿ ಬೆಳಗ್ಗಿನ ಪೂಜೆಯ ಬಳಿಕ ನಾಗ ದೇವರಿಗೆ ಅಭಿಷೇಕ ಸಮರ್ಪಣೆ ನಡೆಯಿತು.
ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಜೊತೆಗೆ ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಸೇವೆ ನಡೆಯಿತು. ನಂತರ ಮಹಾಮಂಗಳಾರತಿ ನೆರವೇರಿಸಿ ಪ್ರಸಾದ ವಿತರಣೆ ಮಾಡಲಾಯಿತು.
ಇದನ್ನೂ ಓದಿ: 🛑ಕೋಲಾರ: ನವ ವಧು-ವರ ಹೊಡೆದಾಟ ಪ್ರಕರಣ
ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ, ಶೇಷ ಸೇವೆ, ಕಾರ್ತಿಕ ಪೂಜೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು. ದೇವಳದ ಹೊರಾಂಗಣದಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರಿಂದ ಸೇವೆ ಸಮರ್ಪಣೆ ನಡೆಯಿತು.