Wed. Nov 20th, 2024

Udupi: ನಾಗರಪಂಚಮಿಗೆ ಇಲ್ಲಿ ಜೀವಂತ ಹಾವಿಗೆ ಪೂಜೆ

ಉಡುಪಿ :(ಆ.9) ಇಂದು ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ. ಆದರೆ ಇಲ್ಲಿ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ.

ಇದನ್ನೂ ಓದಿ; 🔴ಉಜಿರೆ: ಅನುಗ್ರಹ ಶಾಲಾ ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ಆಯ್ಕೆ

ಕಾಪುವಿನ ಮಜೂರು ಮಲ್ಲಾರಿನ ನಿವಾಸಿ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಹಾವುಗಳೂ ಸಂಕಷ್ಟದಲ್ಲಿದ್ದರೆ ಗೋವರ್ಧನ್ ನೆರವಿಗೆ ಧಾವಿಸ್ತಾರೆ. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡಿ ಗುಣಮುಖಗೊಂಡ ನಂತರ ಕಾಡಿಗೆ ಬಿಡುವ ಮೂಲಕ ಹಲವು ಬಾರಿ ಉರಗ ಪ್ರೇಮ ಮೆರೆದಿದ್ದಾರೆ.

ಈವರೆಗೆ 1೦೦೦ ಕ್ಕೂ ಅಧಿಕ ಹಾವುಗಳ ಆರೈಕೆ ಮಾಡಿದ್ದಾರೆ. ತನ್ನ ಆರೈಕೆಯಲ್ಲಿ ಇರುವ ಹಾವುಗಳಿಗೆ ತನು ಎರೆಯುವ ಮೂಲಕ ನಾಗರ ಪಂಚಮಿಯನ್ನು ಆಚರಿಸುತ್ತಾರೆ.

ಎಲ್ಲಾ ಕಡೆ ನಾಗಕಲ್ಲಿಗೆ ಪೂಜೆ ಪುನಸ್ಕಾರಗಳು ನಡೆಯುತ್ತೆ. ಆದ್ರೆ ಪಂಚಮಿಯಂದು ನಮ್ಮ ಮನೆಯಲ್ಲಿ ನಮ್ಮ ಮನೆಯವರು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ನಮ್ಮೆಲ್ಲರ ಭಾಗ್ಯ ಎನ್ನುತ್ತಾರೆ ಗೋರ್ವಧನ್ ಭಟ್.

Leave a Reply

Your email address will not be published. Required fields are marked *