Wed. Nov 20th, 2024

Paris Olympics 2024: 21ನೇ ವಯಸ್ಸಿನಲ್ಲಿ ಕಂಚು ಗೆದ್ದು – ಇತಿಹಾಸ ಬರೆದ ಅಮನ್ ಸೆಹ್ರಾವತ್

Paris Olympics 2024:(ಆ.10) ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: 🔴ಧರ್ಮಸ್ಥಳ: ಶಾಂತಿವನ ಟ್ರಸ್ಟ್ ವತಿಯಿಂದ ಪ್ರಕಟಿಸಲಾದ ಪುಸ್ತಕಗಳ ಲೋಕಾರ್ಪಣೆ

ಶುಕ್ರವಾರ ನಡೆದ 57 ಕೆಜಿ ಪುರುಷರ ಫ್ರಿ ಸ್ಟೈಲ್‌ ವಿಭಾಗದಲ್ಲಿ ಅಮನ್‌ ನಿಗದಿತ ಸಮಯದಲ್ಲಿ 13-5 ಅಂಕಗಳಿಂದ ಪೋರ್ಟೊ ರಿಕೊದ ಡೇರಿಯನ್ ಡೋಯಿ ಕ್ರೂಜ್ ಅವರನ್ನು ಮಣಿಸಿದರು. ಈ ಮೂಲಕ ಭಾರತ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಆರನೇ ಪದಕವನ್ನು ತನ್ನದಾಗಿಸಿಕೊಂಡಿದೆ. ಅಮನ್‌ ಈ ಬಾರಿಯ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದ ಏಕೈಕ ಪುರುಷ ಕುಸ್ತಿ ಪಟು ಆಗಿದ್ದರು.

ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಗಿದೆ.

Leave a Reply

Your email address will not be published. Required fields are marked *