Wed. Nov 20th, 2024

Puttur: ಆಟೋ ರಿಕ್ಷಾದಲ್ಲಿ ನಿಷೇಧಿತ ಎಂ.ಡಿ.ಎಂ.ಎ. ಮಾದಕ ವಸ್ತು ಸಾಗಾಟ ಪತ್ತೆ- ಆರೋಪಿಗಳು ಪೋಲಿಸರ ವಶಕ್ಕೆ

ಪುತ್ತೂರು :(ಆ.10) ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸುತ್ತಿದ್ದ ನಿಷೇಧಿತ ಎಂ.ಡಿ.ಎಂ.ಎ ಮಾದಕ ವಸ್ತುವನ್ನು ಆರೋಪಿಗಳ ಸಹಿತ ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 🛑ಬೆಳ್ತಂಗಡಿ: 9/11 ದಾಖಲೆಯನ್ನು ತಾಲೂಕು ಕೇಂದ್ರದಲ್ಲಿ ಸಿಗುವಂತೆ ಮಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಕೃತಜ್ಞತೆಯನ್ನು ಸಲ್ಲಿಸಿದ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ

ಪುತ್ತೂರು ತಾಲೂಕಿನ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಕೆಎ-21-ಸಿ-3003 ನೇ ನೋಂದಣಿ ಸಂಖ್ಯೆಯ ಆಟೋರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ, ಚಾಲಕ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿದ್ದು ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ಓಡಲು ಪ್ರಯತ್ನಿಸಿದಾಗ ಪೊಲೀಸರು ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ನಿಷೇಧಿತ ಎಂ.ಡಿ.ಎಂ.ಎ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ನಿಲ್ಲಿಸಲು ಸೂಚಿಸಿದರೂ ವಾಹನದಲ್ಲಿದ್ದ ಚಾಲಕ ಮತ್ತು ಹಿಂದಿನ ಸೀಟಿನಲ್ಲಿದ್ದ ವ್ಯಕ್ತಿಯು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿದ್ದಾರೆ.


ಸದ್ರಿ ಆಪಾದಿತರುಗಳನ್ನು ಹಿಡಿದು ವಿಚಾರಿಸಲಾಗಿ ಸಮರ್ಪಕವಾದ ಉತ್ತರ ನೀಡದಿರುವ ಹಿನ್ನೆಲೆಯಲ್ಲಿ ವಾಹನದ ದಾಖಲಾತಿಗಳನ್ನು ಹಾಗೂ ವಾಹನವನ್ನು ತಪಾಸಣೆ ನಡೆಸಿದಾಗ, ಆಟೋರಿಕ್ಷಾದಲ್ಲಿ ಸುಮಾರು 18,720 ರೂ ಮೌಲ್ಯದ 9.36 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು 15 ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್ ಗಳು ಪತ್ತೆಯಾಗಿರುತ್ತದೆ. ವಶಪಡಿಸಿಕೊಂಡ ನಿಷೇಧಿತ ಮಾದಕ ವಸ್ತು ಮತ್ತು ಆಟೋರಿಕ್ಷಾವನ್ನು ಹಾಗೂ ಆರೋಪಿಗಳಾದ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ ( 24 ವ), ಪೆರಾಜೆ ಗ್ರಾಮದ ಏನಾಜೆ ಬುಡೋಳಿಯ ಮಹಮ್ಮದ್ ಆಸೀಫ್ .ಬಿ (21.ವ), ಮತ್ತು ಸಿನಾನ್ ಎಂಬವರುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 94/2024 ಕಲಂ: U/s 8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಲಂ: 3(5) BNS 2023 ರಂತೆ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕ ಅವಿನಾಶ್ .ಹೆಚ್ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *