Wed. Nov 20th, 2024

Vitla: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಂಗಡಿ ಮಾಲೀಕ ಅಶ್ರಫ್.!!

ವಿಟ್ಲ:(ಆ.12) ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಅಂಗಡಿ ಮಾಲೀಕ ಅಶ್ರಫ್ ಎನ್ನುವಾತ ಲೈಂಗಿಕ ದೌರ್ಜನ್ಯ ವೆಸಗಿದ ಹೀನಾಯ ಕೃತ್ಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: 🔴ಉಡುಪಿ: ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ

ವಿಟ್ಲ ಠಾಣಾ ವ್ಯಾಪ್ತಿಯ ಕುದ್ದುಪದವು ಎಂಬಲ್ಲಿನ ಎಂ.ಕೆ ಸ್ಟೋರ್ ಎಂಬ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಅಶ್ರಫ್ (40) ಎಂದು ಗುರುತಿಸಲಾಗಿದೆ.

ಅಂಗಡಿಗೆ ಬಾಲಕಿ ತೆರಳಿದ ವೇಳೆ ಅಂಗಡಿಯ ಮಾಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಹಿಂ.ಜಾ.ವೇ.ಮುಖಂಡರಿಂದ ಠಾಣೆಗೆ ಭೇಟಿ:
ಈ ಹಿಂದೆಯೂ ಈತ ಅಂಗಡಿಗೆ ಬಂದ ಹಲವಾರು ಮಹಿಳೆಯರೊಂದಿಗೆ ಇದೆ ರೀತಿ ವರ್ತಿಸಿದ ಎನ್ನುವ ಆರೋಪ ಕೇಳಿಬಂದಿದೆ. ಮಾಹಿತಿ ತಿಳಿದ ಕೂಡಲೇ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಘಟನೆಯನ್ನು ಖಂಡಿಸಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ವಿಟ್ಲ ಪೊಲೀಸರಿಗೆ ಅಗ್ರಹಿಸಿದ್ದಾರೆ. ಸಿ.ಸಿ.ಕ್ಯಾಮರಾ ದೃಶ್ಯಗಳು ಪೋಲಿಸರಿಗೆ ದೊರಕಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮುಖಂಡರು ವಿಟ್ಲ ಠಾಣೆಗೆ ಭೇಟಿ ನೀಡಿದ್ದು, ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *