ಮೇಷ ರಾಶಿ: ಕಾರ್ಯವನ್ನು ಚೆನ್ನಾಗಿ ನಿರ್ವಹಿಸಿದರೂ ಕೊನೆಯಲ್ಲಿ ಏನಾದರೂ ಮಾಡಿಕೊಳ್ಳುವಿರಿ. ಅನುಭವಿ ಜನರಿಂದ ನೀವು ಸಹಕಾರ ಪಡೆಯುವಿರಿ. ಕುಟುಂಬದ ಸಂತೋಷಕ್ಕಾಗಿ ಕೆಲವನ್ನು ತ್ಯಾಗ ಮಾಡಬೇಕಾಗುವುದು. ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಬಹುದು. ವೃತ್ತಿಕ್ಷೇತ್ರದಲ್ಲಿ ಇಂದು ಅತಿಯಾದ ಉತ್ಸಾಹ ಬೇಡ.
ವೃಷಭ ರಾಶಿ: ನಿಮ್ಮನ್ನು ನಂಬಿ ಬಂದವರಿಗೆ ಬೇಸರಕೊಡುವುದು ಬೇಡ. ಹೊಸತನ್ನು ಹುಡುಕಲು ಆರಂಭಿಸುವಿರಿ. ದಿನವನ್ನು ನೀವು ಆರಾಮವಾಗಿ ಕಳೆಯುವುರಿ. ವೃತ್ತಿಜೀವನದಲ್ಲಿ ನಿಮ್ಮ ಪ್ರಯತ್ನವು ಫಲಕೊಡುವುದು. ನಿಮ್ಮ ನಾಯಕನಿಂದ ನಿಮಗೆ ಬೇಕಾದ ಸಂಪೂರ್ಣ ಬೆಂಬಲ ಸಿಗಲಿದೆ.
ಮಿಥುನ ರಾಶಿ: ನೀವು ಯಾರನ್ನೂ ನಿರ್ಲಕ್ಷ್ಯದಿಂದ ನೋಡುವುದು ಬೇಡ. ಕುಟುಂಬದಲ್ಲಿ ಬರುವ ಮಾತಿಗೆ ನೀವು ಪ್ರತಿಕ್ರಿಯೆ ಕೊಡುವುದು ಬೇಡ. ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಆರ್ಥಿಕವಾದ ಸಬಲತೆಯು ನಿಮಗೆ ಚೈತನ್ಯವನ್ನು ಕೊಡುವುದು. ಕಚೇರಿಯಲ್ಲಿ ಕೆಲಸದ ಒತ್ತಡ ಇಂದು ಅಧಿಕವಾಗಿರಲಿದೆ.
ಕರ್ಕಾಟಕ ರಾಶಿ: ನಿಮ್ಮ ಅನಾನುಕೂಲವನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ನಿಮ್ಮ ಆದಾಯದ ಮೂಲವನ್ನು ಸರಿಯಾಗಿ ಪರೀಕ್ಷಿಸಿಕೊಳ್ಳಿ. ಈ ದಿನ ನೀವು ಗಮನ ಕೊಡದಿದ್ದರೆ, ಅನೇಕ ಉತ್ತಮ ಅವಕಾಶಗಳು ಕಳೆದುಹೋಗಬಹುದು. ಕುಟುಂಬ ಮಹತ್ವವನ್ನು ಅರ್ಥಮಾಡಿಕೊಳ್ಳಿ ಮತ್ತು ಅವರ ಜೊತೆ ನಿಮ್ಮ ವ್ಯವಹಾರವನ್ನು ಇಟ್ಟುಕೊಳ್ಳಿ.
ಸಿಂಹ ರಾಶಿ: ಆರ್ಥಿಕ ವಿಚಾರಕ್ಕೆ ದಾಂಪತ್ಯದಲ್ಲಿ ಇಂದು ಕಲಹವಾಗುವುದು. ಸಣ್ಣ ಮೊತ್ತವಾದರೂ ಅದನ್ನು ಉಳಿಸುವ ಬಗ್ಗೆ ಯೋಚಿಸುವಿರಿ. ಹಿತಶತ್ರುಗಳಿಂದ ಬೇಕಾದ ಮಾಹಿತಿಯು ಸಿಗಲಿದೆ. ದಿನ ನಿಮ್ಮ ಸಮಯವು ಬಹಳ ಉತ್ಸಾಹ ಮತ್ತು ನೆಮ್ಮದಿಯಿಂದ ಕಳೆದುಹೋಗಲಿದೆ. ಅತಿಯಾದ ಆಲೋಚನೆಯಿಂದ ತಲೆನೋವು ಉಂಟಾಗಬಹುದು.
ಕನ್ಯಾ ರಾಶಿ: ಇಂದು ನಿಮ್ಮ ಮೇಲೆ ಎಲ್ಲರಿಂದ ಆಕ್ರಮಣವಾಗಬಹುದು. ಆದರೆ ನೀವು ಧೃತಿಗೆಡದೇ ಇಲ್ಲವನ್ನೂ ನಿಭಾಯಿಸವಿರಿ. ನೀವು ಮಾಡದ ಕಾರ್ಯಗಳಿಗೆ ನಿಮ್ಮ ಹಣೆಪಟ್ಟಿ ಬೀಳಬಹುದು. ಅದನ್ನು ಎದುರಿಸುವ ಚಾಕಚಕ್ಯತೆ ನಿಮ್ಮದಾಗಲಿದೆ. ಇಂದು ಜಾಣ್ಮೆಯಿಂದ ಮಾಡಿದ ಕೆಲಸಕ್ಕೆ ನಿಮಗೆ ಮೆಚ್ಚುಗೆ ಸಿಗುವುದು.
ತುಲಾ ರಾಶಿ: ನಿಮ್ಮನ್ನು ಗೌರವಿಸಿಲ್ಲ ಎಂಬ ಅಳುಕು ಕಾಣಿಸಬಹುದು. ಪರೋಪಕಾರದಲ್ಲಿ ಆಸಕ್ತಿ ಹೆಚ್ಚಿದ್ದು ಇನ್ನೊಬ್ಬರನ್ನೂ ಇದಕ್ಕೆ ಪ್ರೇರಿಸುವಿರಿ. ಉತ್ತಮ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳಲಿದ್ದೀರಿ. ನಿಮ್ಮ ಅಡಿಯಲ್ಲಿ ಬರುವ ನೌಕರರ ನಡವಳಿಕೆಯನ್ನು ಪ್ರಶ್ನಿಸಬೇಕಾದ ಸಂದರ್ಭವು ಬರಬಹುದು.
ವೃಶ್ಚಿಕ ರಾಶಿ: ಇಂದು ನಿಮ್ಮ ವಿದೇಶ ಪ್ರಯಾಣವು ಸಫಲವಾಗುವುದುದೆಂಬ ಭರವಸೆ ಬರಲಿದೆ. ಸ್ವಾಭಿಮಾನವನ್ನು ಮರೆತು ನೀವು ಜೀವನ ಸಾಗಿಸುವುದು ಕಷ್ಟವಾದೀತು. ನಿಮಗೆ ಲಾಭವಾಗುವ ಕೆಲವು ಕಾರ್ಯಗಳು ನಿಮಗೆ ಸಿಗಬಹುದು. ನಿಮ್ಮ ಆರೋಗ್ಯ ಸಮಸ್ಯೆಗೆ ಕಾಳಜಿ ಅತ್ಯವಶ್ಯಕ. ಕಷ್ಟವೆಂದು ಎಲ್ಲವನ್ನೂ ತ್ಯಾಗ ಮಾಡಲಾಗದು.
ಧನು ರಾಶಿ: ತಪ್ಪು ತಿಳಿವಳಿಕೆಯಿಂದ ಸಂಬಂಧವು ದೂರಾಗುವ ಸಾಧ್ಯತೆ ಇದೆ. ಕಾರ್ಯದ ಕಾರಣ ಸಹೋದ್ಯೋಗಿಗಳ ಜೊತೆ ದೂರ ಪ್ರಯಾಣಮಾಡಬೇಕಾಗುವುದು. ವಿದ್ಯಾರ್ಥಿಗಳು ತಮ್ಮ ಓದಿನ ಉತ್ಸಾಹವನ್ನು ಕಳೆದುಕೊಳ್ಳುವರು. ಸಾಮಾಜಿಕ ಗೌರವವು ಸಿಗುವಂತಹ ಕೆಲಸವನ್ನು ನೀವು ಮಾಡುವಿರಿ.
ಮಕರ ರಾಶಿ: ನಿಮಗೆ ಅನ್ಯತರ ಮಾತು ಬಹಳ ಹಿತವೆನಿಸವುದು. ನಿಮಗೆ ಇಂದು ಅವ್ಯಕ್ತ ಭಯವು ಕಾಡುವುದು. ಎಲ್ಲ ಕಡೆಗಳಿಂದ ತೊಂದರೆಯಾದಂತೆ ಅನ್ನಿಸೀತು. ಇಂದು ನಿಮ್ಮ ಕುಟುಂಬದಲ್ಲಿ ನೆಮ್ಮದಿ ಇರಲಿದೆ. ವೆಚ್ಚವನ್ನು ನಿಯಂತ್ರಿಸಿ, ಆರ್ಥಿಕ ಲಾಭವನ್ನು ಪಡೆಯುವಿರಿ. ನಿಮ್ಮ ಒಂದು ತಪ್ಪು ನಿರ್ಧಾರವು ನಿಮ್ಮ ಆರ್ಥಿಕತೆಯನ್ನು ಸಡಿಲಿಸಬಹುದು.
ಕುಂಭ ರಾಶಿ: ವೃತ್ತಿಜೀವನದಲ್ಲಿ ಅಧಿಕಾರಿಗಳಿಂದ ಕಿರಿಕಿರಿ ಉಂಟಾಗಬಹುದು. ಅಧಿಕ ಲಾಭವನ್ನು ಗಳಿಸಲು ಹೋಗಿ ಇರುವುದನ್ನು ಕಳೆದುಕೊಳ್ಳಬಹುದು. ನಿಮ್ಮ ಇಷ್ಟದ ವಸ್ತುಗಳನ್ನು ಪಡೆಯುವ ಖುಷಿಯೇ ಬೇರೆ. ನಿಮಗೆ ಉದ್ಯೋಗದಲ್ಲಿ ಬಡ್ತಿಯಿಂದ ಸಂತೋಷವು ಇಮ್ಮಡಿಸುವುದು. ನಿಮ್ಮ ನಿರ್ಧಾರಗಳು ಇಂದು ಈಡೇರಬಹುದು. ಸವಾಲುಗಳನ್ನು ಬಹಳ ಜಾಣ್ಮೆಯಿಂದ ಸ್ವೀಕರಿಸಬೇಕು ಮತ್ತು ಎದುರಿಸಬೇಕು.
ಮೀನ ರಾಶಿ: ವ್ಯವಹಾರದ ವಿಚಾರದಲ್ಲಿ ಪೂರ್ವಾಪರ ವಿವೇಚನೆಯಿಂದ ಮುಂದುವರಿಯುವುದು ಉತ್ತಮ. ನೀವು ಬಂಧುಗಳಿಂದ ಯಾವುದಾದರೂ ಸಹಾಯವನ್ನು ಬಯಸುವಿರಿ. ನೀವು ಇಂದು ವೃತ್ತಿಯನ್ನು ಬದಲಿಸುವ ನಿರ್ಧಾರ ಮಾಡಲಿದ್ದೀರಿ. ನಿಮ್ಮ ವೃತ್ತಿಕ್ಷೇತ್ರದಲ್ಲಿ ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗಲಿದೆ.