Mon. Feb 17th, 2025

Bantwala: ಬಾಲಕಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಅಫೀಕ್ ಅರೆಸ್ಟ್.!

ಬಂಟ್ವಾಳ :(ಆ.14) ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: 🔴ಬೆಳ್ತಂಗಡಿ : ಎರಡು ಜೋಡಿ ಪ್ರೇತಾತ್ಮಗಳಿಗೆ ಮದುವೆ

ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ‌ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಇನ್ನೋರ್ವ ಪ್ರಮುಖ ಆರೋಪಿ ನಾಪತ್ತೆಯಾಗಿದ್ದ. ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿಯಾಗಿದ್ದ ಅಫೀಕ್ ಯಾನೆ ಮಹಮ್ಮದ್ ಅಫೀಕ್ ( 19)ಎಂಬಾತನ ಬಂಧನವಾಗಿದೆ.

ಈ ಪ್ರಕರಣದ ಇನ್ನೆರಡು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್ ನ ಬಂಧನಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ‌ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು