Wed. Nov 20th, 2024

Belal: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಬೆಳಾಲು:(ಆ.14) ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆ ಬೆಳಾಲಿನಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: 🔴ಕಟೀಲು : ರಾಮ್ ಫ್ರೆಂಡ್ಸ್ (ರಿ.) ಕಟೀಲು ಐದನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಹಾಯಧನ ವಿತರಣೆ

ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಆಚರಣೆ ಮಾತ್ರ ಆಗಿರದೆ ಪಾಲಿಸಿಕೊಂಡು ಬರಬೇಕು” ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ರಾಮಕೃಷ್ಣ ಭಟ್ ಇವರು “ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚು ಸೂಕ್ತ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕ ಶ್ರೀ ಜಯರಾಮ ಮಯ್ಯ “ನಮ್ಮ ಸಂಸ್ಕೃತಿಯ ಅರಿವನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ” ಎಂದು ತಿಳಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀ ರವಿಚಂದ್ರ ಜೈನ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ಮತ್ತು ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದೀಕ್ಷಿತಾ ಸ್ವಾಗತಿಸಿ, ತ್ರಿಷಾ ಜೈನ್ ವಂದಿಸಿ, ಈ ಕಾರ್ಯಕ್ರಮವನ್ನು ಯೋಗಿತಾ ನಿರೂಪಿಸಿದರು.

Leave a Reply

Your email address will not be published. Required fields are marked *