Wed. Nov 20th, 2024

Belthangadi: ಭ್ರಷ್ಟಾಚಾರ ಮಾಡಿಲ್ಲ, ದುಡ್ಡು ಮುಟ್ಟಿಲ್ಲ – ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ

ಬೆಳ್ತಂಗಡಿ:(ಆ.14) ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ದೇವಿ ನೀಡಲಿ, ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಮಾಣ ಮಾಡಿದ್ದಾರೆ.

ಇದನ್ನೂ ಓದಿ: 🛑ಉಳ್ಳಾಲ : ಸಮೀ‌ರ್ ಹತ್ಯೆ ಪ್ರಕರಣ – ನಾಲ್ವರು ವಶಕ್ಕೆ

ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಇಂದು ಈ ಬಗ್ಗೆ ಮಾರಿಗುಡಿಯಲ್ಲಿ ಪ್ರಮಾಣ ಮಾಡುವುದಾಗಿ ಹೇಳಿದ್ದರು.
ಐ.ಬಿ ಯ ಕಾಮಗಾರಿಯಲ್ಲಿನ ಭ್ರಷ್ಟಾಚಾರ, ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಸೇರಿದಂತೆ ಹಲವು ಆರೋಪಗಳನ್ನು ರಕ್ಷಿತ್ ಶಿವರಾಂ ಶಾಸಕರ ವಿರುದ್ದ ಮಾಡಿದ್ದರು. ಇದಕ್ಕೆ ಉತ್ತರಿಸಿದ ಶಾಸಕರು ಈ ಆರೋಪಗಳೆಲ್ಲ ಸುಳ್ಳು, ತಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ, ಈ ಬಗ್ಗೆ ಮಾರಿಗುಡಿಯಲ್ಲಿ ಪ್ರಮಾಣ ಮಾಡುತ್ತೇನೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದಿದ್ದರು.

ಅದರಂತೆ ಇಂದು ಬೆಳಿಗ್ಗೆ ಶಾಸಕರು ಮಾರಿಗುಡಿಯಲ್ಲಿ ಪ್ರಮಾಣ ಮಾಡಿ , ಭ್ರಷ್ಟಾಚಾರ ನಡೆಸಿಲ್ಲ ಡಿಪಿ ಜೈನ್ ಕಂಪನಿಯಿಂದ 3ಕೋಟಿ ಕಿಕ್ ಬ್ಯಾಕ್ ಪಡೆದಿಲ್ಲ, ಒಂದು ರೂಪಾಯಿ ಹಣ ಯಾರಿಂದಲೂ ಪಡೆದಿಲ್ಲ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ರಕ್ಷಿತ್ ಶಿವರಾಂ ಸೇರಿದಂತೆ ಎಲ್ಲರಿಗೂ ತಕ್ಕ ಶಿಕ್ಷೆಯನ್ನು ಬೆಳ್ತಂಗಡಿಯ ಮಾರಿಗುಡಿಯ ದೇವಿ ನೀಡಲಿ. ಒಂದು ವೇಳೆ ಅವರು ಆರೋಪಿಸಿದಂತೆ ನಾನು ತಪ್ಪು ಮಾಡಿದ್ದರೆ ನನ್ನನ್ನೂ ಶಿಕ್ಷಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ, ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *